ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಫೀ ರದ್ದುಗೊಳಿಸಿದ ಕೇಂದ್ರ ಸರ್ಕಾರ!

0
667

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಕೇಂದ್ರ ರ್ಸೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ರ್ಸತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ತಾತ್ಕಾಲಿಕವಾಗಿ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕಗಳನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಗತ್ಯ ಸೇವಾ ವಾಹನಗಳ ಸರಾಗ ಓಡಾಟಕ್ಕೆ ಅನುಕೂಲವಾಗುವಂತೆ ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಿರುವುದಾಗಿ ಗಡ್ಕರಿ ತಿಳಿಸಿದ್ದಾರೆ.

ಅಗತ್ಯ ಸೇವಾ ಸರಕು ವಾಹನಗಳು ತುರ್ತಾಗಿ ಸ್ಥಳಗಳನ್ನು ತಲುಪಬೇಕಿರುವುದರಿಂದ ಟೋಲ್‌ಗಳನ್ನು ಮುಕ್ತಗೊಳಿಸಲಾಗಿದೆ ಎಂದು ಕೇಂದ್ರ ಸಾರಿಗೆ ಮಾಹಿತಿ ನೀಡಿದೆ.

ಆದರೆ ಟೋಲ್ ಶುಲ್ಕ ರದ್ದತಿ ತಾತ್ಕಾಲಿಕವಾಗಿದ್ದು, ಜನಜೀವನ ಸಾಮಾನ್ಯ ಸ್ಥಿತಿಗೆ ಮರಳಿದ ಮೇಲೆ ಮತ್ತೆ ಟೋಲ್ ಶುಲ್ಕ ಕೇಂದ್ರಗಳನ್ನು ಪ್ರಾರಂಭಿಸುವುದಾಗಿಯೂ ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಒಟ್ಟಿನಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದ ಒಂದೊಂದೇ ಇಲಾಖೆಗಳು ಅಧಿಕೃತವಾಗಿ ಧುಮುಕುತ್ತಿದ್ದು, ಸಂಕಷ್ಟದ ಸಮಯದಲ್ಲಿ ನಾಗರಿಕರಿಗೆ ಹಲವು ವಿನಾಯ್ತಿಗಳನ್ನು ನೀಡುವ ಮೂಲಕ ನೆರವಿಗೆ ಧಾವಿಸಿರುವುದು ಶ್ಲಾಘನೀಯ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)