ವಿದ್ಯಾರ್ಥಿಗಳಿಗೆ ‘ಮಹತ್ವದ ಮಾಹಿತಿ’, ಇಂದು ಪ್ರಥಮ ‘ಪಿಯುಸಿ’ ಫಲಿತಾಂಶ ಪ್ರಕಟ

0
371

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು : ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5 ರಂದು ಅಂದರೆ ಇಂದು ಪ್ರಕಟವಾಗಲಿದೆ. ಹೌದು. ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5 ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟಪಡಿಸಿದೆ.

ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‌ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಫಲಿತಾಂಶ ತಿಳಿಯಲು ಕಾಲೇಜುಗಳಿಗೆ ಆಗಮಿಸುವುದನ್ನು ನಿಷೇಧಿಸಲಾಗಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)