ಉಡುಪಿ | ಐವರಲ್ಲಿ ಕೋವಿಡ್‌ ಸೋಂಕು ದೃಢ

0
707

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ: ಈಚೆಗೆ ದುಬೈನಿಂದ ಮರಳಿದ್ದ ಐವರಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದೆ. 52, 31, 37 ವರ್ಷದ ಪುರುಷರು ಹಾಗೂ 33, 38 ವರ್ಷದ ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮೇ 13ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಉಡುಪಿ ಜಿಲ್ಲೆಯ 49 ಮಂದಿಯನ್ನು ಜಿಲ್ಲೆಗೆ ಕರೆತಂದು ಕ್ವಾರಂಟೈನ್‌ ಮಾಡಲಾಗಿತ್ತು. ಎಲ್ಲರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಲ್ಲಿ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ಕ್ವಾರಂಟೈನ್‌ನಲ್ಲಿದ್ದ ಐವರು ಸೋಂಕಿತರಿಗೆ ಟಿಎಂಎ ಪೈ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುಬೈನಿಂದ ಬಂದವರೆಲ್ಲರೂ ಕ್ವಾರಂಟೈನ್‌ನಲ್ಲಿರುವುದರಿಂದ ಸೋಂಕು ಸಮುದಾಯಕ್ಕೆ ಹರಡುವ ಅಪಾಯವಿಲ್ಲ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಸೋಂಕಿತ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಜಿಲ್ಲೆ ಹಸಿರು ವಲಯಕ್ಕೆ ಸೇರ್ಪಡೆಯಾಗಿತ್ತು. ಈಚೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರವೂ ಆರಂಭವಾಗಿತ್ತು. ಈಗ ದಿಢೀರ್ ಸೋಂಕು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)