ಚಿತ್ರದುರ್ಗದ ಮೂಲದ ಬಾಲಕಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕು ದೃಢ

0
211

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗದ 17 ವರ್ಷದ ಬಾಲಕಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಚಿತ್ರದುರ್ಗ ಮೂಲದ 17 ವರ್ಷದ ಬಾಲಕಿ ಕ್ಯಾನ್ಸರ್ ರೋಗದ ಕಾರಣ ಉಡುಪಿ ಜಿಲ್ಲೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇದೀಗ ಆಕೆಗೆ (ಪಿ-1290) ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿಕೆ ನೀಡಿದ್ದಾರೆ.

ಇದನ್ನು ಹೊರತು ಪಡಿಸಿ ಜಿಲ್ಲೆಯಲ್ಲಿ ಇಂದು ನಾಲ್ಕು ಹೊಸ ಪ್ರಕರಣಗಳು ದೃಢವಾಗಿದೆ. ಎಂಟು ವರ್ಷದ ಮಗು ಸೇರಿದಂತೆ ಎಲ್ಲರೂ ಮುಂಬೈನಿಂದ ಬಂದು ಕ್ವಾರಂಟೈನ್ ನಲ್ಲಿದ್ದರು.

ರಾಜ್ಯದಲ್ಲಿ ಇಂದು ಒಟ್ಟು 127 ಹೊಸ ಕೋವಿಡ್ ಪ್ರಕರಣ ದೃಢವಾಗಿದೆ. ಇದಿರಂದ ರಾಜ್ಯದ ಒಟ್ಟು ಸೋಂಕಿತರ ಪಟ್ಟಿ 1373ಕ್ಕೆ ಏರಿಕೆಯಾಗಿದೆ. ಒಟ್ಟು 40 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)