ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅತಿಥಿಗೃಹದ ಬದಲು ಕ್ವಾರಂಟೈನ್ ಗೆ ದೇವಳದ ಪ್ರೌಡಶಾಲೆ ಬಳಸುವುದು ಉತ್ತಮ : ನರಸಿಂಹ ಹಳಗೇರಿ

0
171

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅತಿಥಿಗೃಹದಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಿದ್ದು ಅಲ್ಲಿ ಅಗತ್ಯಕ್ಕಿಂತ ಹೆಚ್ಚನ ಜನರನ್ನು ಕ್ವಾರಂಟೈನ್ ಮಾಡಿದ್ದು ಸಾಮಾಜಿಕ ಅಂತರ ಹಾಗೂ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ ಅದರ ಬದಲಾಗಿ ಕೊಲ್ಲೂರು ದೇವಳದ ಪ್ರೌಡಶಾಲೆಯಲ್ಲಿ ಕ್ವಾರಂಟೈನ್ ಮಾಡುವುದು ಉತ್ತಮ ಎಂದು ಕೊಲ್ಲೂರು ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ ಜಿಲ್ಲಾಧಿಕಾರಿಗಳಿಗೆ ತಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕೋವಿಡ್ -19 ಮುಕ್ತವಾದ ನಂತರ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ದೇವಳದ ಅತಿಥಿಗೃಹದಲ್ಲಿ ವಾಸಿಸಲು ಅನುಮಾನ ಪಡುತ್ತಾರೆ. ಖಾಸಗಿ ವಸತಿಗೃಹದ ಮಾಲಿಕರು ದಿಕ್ಕು ತಪ್ಪಿಸಿ ಅಲ್ಲಿಗೆ ತೆರಳುವಂತೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ.

ಕರ್ತತ್ಯ ನಿರ್ವಹಿಸುತ್ತಿರುವ ದೇವಸ್ಥಾನದ ಸಿಬ್ಬಂದಿಗಳಿಗೆ ಗುಣಮಟ್ಟದ ಮಾಸ್ಕ್ , ಗ್ಲೌಸ್, ಸ್ಯಾನಿಟೈಸರ್, ನೀಡಬೇಕಾಗಿ ನರಸಿಂಹ ಹಳಗೇರಿ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)