ಶಿರೂರು – ಸಿಬ್ಬಂದಿಗೆ ಕೊರೊನಾ ಸೋಂಕು, ಆಸ್ಪತ್ರೆ ಸೀಲ್ ಡೌನ್

0
338

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ಶಿರೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಒಬ್ಬರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಈ ಸಮುದಾಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಸಮುದಾಯ ಕೇಂದ್ರದ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಉಳಿದ ಎಲ್ಲಾ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಮೂರು ದಿನಗಳ ಕಾಲ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

ಇತರೆ ಸಿಬ್ಬಂದಿಯನ್ನು ಸದ್ಯ ಕ್ವಾರಂಟೈನ್ ಮಾಡಲಾಗಿದ್ದು, ಐದು ದಿನದ ಬಳಿಕ ಸೋಂಕಿತರ ನೇರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 1063 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢವಾಗಿದೆ. ಇವರಲ್ಲಿ 965 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು 96 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 267 ಜನರ ಮಾದರಿಗಳ ವರದಿ ಬರಬೇಕಿದೆ.

ಜಿಲ್ಲೆಯಲ್ಲಿ ಪ್ರಸ್ತುತ 741 ಮಂದಿ ಮನೆಗಳಲ್ಲಿ, 81 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿ ಕ್ವಾರಂಟೈನ್‌ ನಲ್ಲಿದ್ದಾರೆ. 11 ಮಂದಿ ಐಸೊಲೇಶನ್‌ ವಾರ್ಡ್‌ಗೆ ಸೇರಿದ್ದು ಇಬ್ಬರು ಬಿಡುಗಡೆಗೊಂಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)