ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕ ಗುಡಾಡಿ ಅಣ್ಣಪ್ಪ ಪೂಜಾರಿ ನಿಧನ

0
237

ಉಪ್ಪುಂದ : ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು-11 ಗುಡಾಡಿ ನಿವಾಸಿ ಅಣ್ಣಪ್ಪ ಪೂಜಾರಿ ( 85) ಅವರು ಜೂ.23ರಂದು ನಿಧನ ಹೊಂದಿದರು.

ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ಮಂಡಲ ಪಂಚಾಯತ್ ಮಾಜಿ ಸದಸ್ಯರಾಗಿ, ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಸಂಘದ ಸಿಬಂದಿ ವರ್ಗದವರು ಸಂತಾಪ ಸೂಚಿಸಿದರು.

ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.