ಬೈಂದೂರು : ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೋವಿಡ್-19 ಸೋಂಕು ದೃಢ

0
425

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು: ಈಗಾಗಲೇ ಎರಡು ಪರೀಕ್ಷೆ ಬರೆದಿರುವ ವಿದ್ಯಾರ್ಥಿನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢವಾದಂತಾಗಿದೆ.

ಈಕೆಗೆ ಅನಾರೋಗ್ಯ ಕಂಡುಬಂದ ಹಿನ್ನಲೆಯಲ್ಲಿ ಈಕೆಯ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ -19 ಸೋಂಕು ಇರುವುದು ದೃಢವಾಗಿದೆ. ಈಕೆ ಈಗಾಗಲೇ ಎರಡು ಪರೀಕ್ಷೆ ಬರೆದಿದ್ದು, ನಂತರ ಅನಾರೋಗ್ಯ ಪೀಡಿತಳಾಗಿದ್ದಾಳೆ.

ಸದ್ಯ ಈಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈಕೆಯ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)