ಬೈಂದೂರು:ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕಿಟ್ ವಿತರಣೆ

0
43

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಅಖಿಲ ಭಾರತ ನಿರ್ಮಾಣ ಕಾರ್ಮಿಕರ ಫೆಡರೇಷನ್ ( CWFI)ಗೆ ಸಂಯೋಜಿಸಲ್ಪಟ್ಟ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (CITU) ಅಡಿಯಲ್ಲಿ ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ(ರಿ.) ಸಿಐಟಿಯು ಆಶ್ರಯದಲ್ಲಿ ಬೈಂದೂರು ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಸಮಾವೇಶವು ದಿನಾಂಕ 28/07/2020 ರಂದು ಬೈಂದೂರಿನ ಸಿಐಟಿಯು ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿತರಣೆ ಮಾಡಲು ಸಾಬೂನು, ಮಾಸ್ಕ್,ಸ್ಯಾನಿಟೈಸರ್ ಒಳಗೊಂಡ ಕಿಟ್ ಗಳನ್ನು ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಕಾರ್ಮಿಕರಿಗೆ ವಿತರಣೆ ಮಾಡಿದ ಬಳಿಕ ಮಾತನಾಡುತ್ತಾ, ಸಂಪತ್ತನ್ನು ಸೃಷ್ಟಿ ಮಾಡುವ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರು ದೇಶದ ಒಟ್ಟು ಆಂತರಿಕ ಉತ್ಪನ್ನದ(ಜಿಡಿಪಿ) ಶೇಕಡಾ 20%ರಷ್ಟು ಕೊಡುಗೆಯನ್ನು ನೀಡುತ್ತಿದ್ದು,ದೇಶದ ಅಭಿವೃದ್ಧಿಯಲ್ಲಿ ಕಟ್ಟಡ ಕಾರ್ಮಿಕರು ಪ್ರಮುಖ ಪಾತ್ರವನ್ನು ವಹಿಸುತ್ತಿರುವುದು ಗಮನಾರ್ಹ ವಿಚಾರವಾಗಿದೆ.ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನಿರುದ್ಯೋಗಿ ಗಳಾಗಿರುವ ಕಾರ್ಮಿಕರಿಗೆ ವಾರಕ್ಕೆ ಎರಡು ಸಾವಿರ ರೂಪಾಯಿ ಯಂತೆ, ಮುಂದಿನ ಮೂರು ತಿಂಗಳು ತನಕ ನಗದು ಪರಿಹಾರ ಕೊಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದರು.

ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗೂ ಕಾರ್ಮಿಕ ಸಂಘದ ಮುಖಂಡರಾದ ಗಣೇಶ್ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ವೆಂಕಟೇಶ್ ಕೋಣಿ,ಮಾಧವ ಉಪ್ಪುಂದ,ಮಂಜು ಪಡುವರಿ,‌ನಾಗರತ್ನ ನಾಡಾ,ವಿಜಯ ಕೊಯಾನಗರ,ರಾಜೀವ್ ಅರೆಹೊಳೆ, ರಾಮ ಕಂಬದಕೋಣೆ, ಅಮ್ಮಯ್ಯ ಬಿಜೂರು,ಮಂಜು ಬಡಾಕೆರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಘದ ತಾಲೂಕು ಅಧ್ಯಕ್ಷ ರಾಜೀವ್ ಪಡುಕೋಣೆ ಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.ಶ್ರೀಧರ್ ಉಪ್ಪುಂದ ವಂದಿಸಿದರು

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)