ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ; ನಿರಂಜನ್ ಭಟ್ ಜಾಮೀನು ಅರ್ಜಿ ತಿರಸ್ಕೃತ

0
396

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ : ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಎನ್‌ಆರ್‌ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.

2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಆನಂತರ 2020ರ ಫೆ.10ರಂದು ಆರೋಪಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.

ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ, ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ, ವೃತ್ತಿಯಲ್ಲಿ ಜ್ಯೋತಿಷಿ ಆಗಿರುವ ಆರೋಪಿ ನಿರಂಜನ್ ಭಟ್‌, ಭಾಸ್ಕರ ಶೆಟ್ಟಿಯವರ ಶವವನ್ನು ಹೋಮ ಕುಂಡದಲ್ಲಿ ಹಾಕಿ ಸುಟ್ಟು ಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.

ಇದೇ ಜೂನ್ ತಿಂಗಳಿನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಕಾರಣದಿಂದ ಷರತ್ತುಬದ್ಧ 15 ದಿನಗಳ ತಾತ್ಕಾಲಿಕ ಜಾಮೀನನ್ನು ನಿರಂಜನ್ ಭಟ್ ಗೆ ಮಂಜೂರುಗೊಳಿಸಲಾಗಿತ್ತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)