ಮಂಗಳೂರು ವಿವಿ : ಪರೀಕ್ಷಾ ವೇಳಾಪಟ್ಟಿ ಪ್ರಕಟ

0
845

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು 2019-20 ನೇ ಸಾಲಿನ ಪದವಿಯ 6 ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿಯ 4 ನೇ ಸೆಮಿಸ್ಟರ್‌ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕೋವಿಡ್‌-19 ನಿಂದಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ ನಡೆಸಲು ಸಾಧ್ಯವಾಗಿಲ್ಲ. ಸದ್ಯಕ್ಕೆ ಯುಜಿಸಿ ಹಾಗೂ ಉನ್ನತ ಶಿಕ್ಷಣ ಇಲಾಖೆಗಳ ಮಾರ್ಗಸೂಚಿಯಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸೆಪ್ಟೆಂಬರ್‌ ಅಂತ್ಯದೊಳಗೆ ನಡೆಸಬೇಕಾಗಿದೆ. ಹೀಗಾಗಿ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.mangaloreuniversity.ac.in ನಲ್ಲಿ ಪ್ರಕಟಿಸಲಾಗಿದೆ.

ಈ ಮಾಹಿತಿಯನ್ನು ಸಂಯೋಜಿತ, ಸ್ವಾಯತ್ತ ಹಾಗೂ ಘಟಕ ಕಾಲೇಜುಗಳು ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ವೆಬ್‌ಸೈಟ್‌ನಿಂದ ಪಡೆಯಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)