ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ?

0
320

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ನಾಳೆ ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ತಿಳಿದು ಬಂದಿದೆ.

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. ನಾಳೆ karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ತಿಳಿದು ಬಂದಿದೆ.

ಅಂದಹಾಗೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ 8.5 ಲಕ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂತಹ ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಾಳೆ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಆದ್ರೇ ಈ ಕುರಿತಂತೆ ಸ್ಪಷ್ಟ ಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಕಟಗೊಳ್ಳುವ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)