ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ

0
272

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ನವಶಕ್ತಿ ಮಹಿಳಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಕೊಲ್ಲೂರು ಸ. ಹಿ.ಪ್ರಾ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯನಿ ಶ್ರೀಮತಿ ಮಾಲತಿ ಅವರನ್ನು ಸನ್ಮಾನಿಸಲಾಯಿತು.

1962ರಿಂದಲೂ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿಕ್ಷಕರ ದಿನಾಚರಣೆ ಆಚರಿಸಲಾಗುವುದು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಠ್ಯಕ್ಕಿಂತಲೂ ಹೆಚ್ಚಾಗಿ ವಿದ್ಯಾರ್ಥಿಗಳಲ್ಲಿ ವಿವೇಕ ತಾಳ್ಮೆ ದೂರದೃಷ್ಟಿ ಮಾನವೀಯತೆನ್ನು ಭೋದಿಸುತ್ತಾ ವಿದ್ಯಾರ್ಥಿಗಳನ್ನು ಭವ್ಯ ದೇಶದ ಸತ್ಪಜೆಗಳನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾದದ್ದು ಎಂದು ನವಶಕ್ತಿ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗ್ರೀಷ್ಮಾ ಗಿರಿಧರ ಭಿಡೆ ಮಾತಾಡಿದರು.

ಸನ್ಮಾನ ಸ್ವೀಕರಿಸಿ ಮಹಿಳೆಯರು ಇಂತಹ ಸಂಘ ಸಂಸ್ಥೆಗಳಲ್ಲಿ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಶ್ಲಾಘನೀಯ. ಹಾಗೂ ಈ ಸಂದರ್ಭದಲ್ಲಿ ನನ್ನನ್ನು ಗುರುತಿಸಿ ಸನ್ಮಾನಸಿದ ನವಶಕ್ತಿ ವೇದಿಕೆ ಎಲ್ಲಾ ಸದಸ್ಯರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರಪತಿ ನಾಗರಾಜ್ ಹೆಬ್ಬಾರ್ ಶ್ರೀಕಲಾ ಹೆಬ್ಬಾರ್ ಉಪಸ್ಥಿತರಿದ್ದರು. ನವಶಕ್ತಿ ವೇದಿಕೆಯ ಕಾರ್ಯದರ್ಶಿ ಸುಜಾತ ಆಚಾರಿ ಸದಸ್ಯರಾದ ಯಶೋದ ಸಂಗೀತ ಸುಗುಣ ಜಯಲಕ್ಷ್ಮಿ ಸುಷ್ಮಾ ಶಾರದ ಉಷಾ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)