ಅಗ್ನಿಶಾಮಕ ಠಾಣೆ, ಪಟ್ಟಣ ಪಂಚಾಯತ್ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ

0
344

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

 

ಬೈಂದೂರು ಅಗ್ನಿಶಾಮಕ ಠಾಣೆ, ಪಟ್ಟಣ ಪಂಚಾಯತ್ ಸೇರಿದಂತೆ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ನೆರವೇರಿಸಿದರು.

ಅಗ್ನಿಶಾಮಕ ಠಾಣೆಯನ್ನು ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ವರ್ಚವಲ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಮೆಸ್ಕಾ ಸಬ್ಸ್ಟೇಷನ್ಗಳನ್ನು ಉದ್ಘಾಟಿಸಲಾಯಿತು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಶಿಲನ್ಯಾಸ ಮಾಡಲಾಯಿತು.

ವೇದಿಕೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಕುಂದಾಪುರ ಸಹಾಯಕ ಕಮಿಷನರ್ ರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಮಂಗಳೂರು ಪ್ರಾಂತ್ಯ ಅಗ್ನಿಶಾಮಕ ಇಲಾಖೆಯ ಮುಖ್ಯ ಅಧಿಕಾರಿ ಜಿ. ತಿಪ್ಪೇಸ್ವಾಮಿ, ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ ಉಪಾಧ್ಯಕ್ಷ ಮಾಲಿನಿ ಕೆ, ಕುಂದಾಪುರ ತಾ.ಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಪುತ್ರನ್ ನಗರಾಭಿವೃದ್ಧಿ ಅಧಿಕಾರಿ ಅರುಣ್ ಪ್ರಭಾ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಜಪ್ಪ, ಉಪಮಂತ್ರಿಗಳ ಉಪ ಕಾರ್ಯದರ್ಶಿ ರವಿ, ಇಂಜಿನಿಯರಿಂಗ್ ಕಾರ್ಯನಿರ್ವಾಹಕ ರಾಜೇಶ್, ಜಿ.ಪಂ ಶಂಕರ ಪೂಜಾರಿ, ಬಾಬು ಶೆಟ್ಟಿ, ಸುರೇಶ್ ಬಟವಾಡಿ ಉಪಸ್ಥಿತರಿದ್ದರು.

ಬೈಂದೂರು ತಹಶೀಲ್ದಾರ ಬಿ.ಪಿ ಪುಜಾರ್ ಸ್ವಾಗತಿಸಿದರು, ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರ್ವಹಿಸಿದರು. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿನಾಯಕ್ ಕಾಮತ್ ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)