ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಪುದುಚೆರಿ ಸಿಎಂ

0
256

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು : ಪುದುಚೆರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಶುಕ್ರವಾರ ಬೆಳಗ್ಗೆ ಶ್ರೀ ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಗುರುವಾರ ರಾತ್ರಿ ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸಿ, ದೇವಸ್ಥಾನ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು. ಬೆಳಗ್ಗೆ ೫ಗಂಟೆಗೆ ಮೂಕಾಂಬಿಕಾ ದೇವಿ ದರ್ಶನ ಪಡೆದ ವಿಶೇಷ ಪೂಜೆ ಸಲ್ಲಿಸಿದ ನಂತರ ಚಂಡಿಕಾ ಹೋಮ ನೆರವೇರಿಸಿ, ಪೂರ್ಣಾಹುತಿ ಸಮರ್ಪಿಸಿದರು.

ಸಿಎಂ ನಾರಾಯಾಣ ಸ್ವಾಮಿ ಅವರ ದೇವಸ್ಥಾನಕ್ಕೆ ಕುಂದಾಪುರ ಎಸಿ ಕೆ.ರಾಜು ಅವರು ಬರಮಾಡಿಕೊಂಡಿದ್ದು, ದೇವಸ್ಥಾನ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಸುತುಗೋಳಿ ದೇವಾಸ್ಥಾನ ಪರವಾಗಿ ಗೌರವಿಸಿದರು. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕ್ಷೇತ್ರದ ಪರವಾಗಿ ಸನ್ಮಾನಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)