ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

0
297

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಶ್ರೀಮಹಾಗಣಪತಿ ದೇವಸ್ಥಾನ ತ್ರಾಸಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಿ.ಲಕ್ಷ್ಮೀನಾರಾಯಣ ಭಟ್‍ಇವರನ್ನು ಗಣಪತಿ ಐತಾಳ್ ಸನ್ಮಾನಿಸಿದರು.ವಲಯ ಅಧ್ಯಕ್ಷ ವಿಶ್ವಂಭರ ಐತಾಳರು ನೀಡಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು,ಡಾ.ಹರೀಶ ಹೊಳ್ಳ ಕೊರೋನಾದ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಸುರೇಂದ್ರ ನಾವಡ ಉಪಸ್ಥಿತರಿದ್ದರು.ಭಾಸ್ಕರ ಮಯ್ಯ ಸ್ವಾಗತಿಸಿ 2019-2020ನೇ ಸಾಲಿನ ವರದಿ ಮಂಡಿಸಿದರು,ಲತಾ ಹೆಬ್ಬಾರ್ ಪ್ರಾರ್ಥಿಸಿದರು,ಡಿ.ಎಂ ಕಾರಂತ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)