ಮೆಟ್ಟಿನಹೊಳೆ : ಗಾಂಧಿಜಯಂತಿ ಹಾಗೂ ಶಾಲಾ ಸ್ವಚ್ಛತಾ ಕಾರ್ಯಕ್ರಮ

0
124

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಹೊಳೆ ಇಲ್ಲಿ ಗಾಂಧಿಜಯಂತಿಯನ್ನು ಕೋವಿಡ್ -19 ಮುನ್ನೆಚ್ಚರಿಕೆ ಯ ಕ್ರಮಗಳೊಂದಿಗೆ ಆಚರಿಸಲಾಯಿತು.

ಶಾಲೆಯ ಎಸ್.ಡಿ.ಎಮ್.ಸಿ.ಉಪಾಧ್ಯಕ್ಷ ದಿನೇಶ್ ಆಚಾರ್ಯ ಸರಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಚಂದು ಕುಲಾಲ್ ಭಾಗವಹಿಸಿ ಸಂದರ್ಭೋಚಿತವಾಗಿ ನುಡಿದರು. ಮುಖ್ಯೋಪಾಧ್ಯಾಯರಾದ ಮಂಜುನಾಥ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕಿ ಶ್ರೀಮತಿ ಶಶಿಕಲಾ ನಿರೂಪಿಸಿದರು.ಶಿಕ್ಷಕಿ ಶ್ರೀಮತಿ ಪ್ರತಿಮಾ ಜಿ ಸ್ವಾಗತಿಸಿದರು.ಹಿರಿಯ ಶಿಕ್ಷಕ ಶ್ರೀ ರಾಮ ಶೆಟ್ಟಿ ವಂದಿಸಿದರು.ಶಿಕ್ಷಕ ತಾಜುದ್ದೀನ್ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ನಂತರ ಶಾಲಾ ಶುಚಿತ್ವ ಮತ್ತು ನೈರ್ಮಲ್ಯತೆಯನ್ನು ಕಾಪಾಡಲು ಪೋಷಕರಿಂದ ಶ್ರಮದಾನ ನಡೆಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)