ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ನಿಧನ

0
860

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಬರಹಗಾರ, ಸಾಹಿತಿ ರವಿ ಬೆಳಗೆರೆ (62) ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರವಿ ಅವರ ಮೃತದೇಹವನ್ನು ಬೆಳಗ್ಗೆ 10 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರೋ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು, ಬನಶಂಕರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ರವಿಬೆಳಗೆರೆ ರಾತ್ರಿ ಪದ್ಮನಾಭ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 12.15ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿತ್ತು. ನಾನು ಹೋಗುವಷ್ಟರಲ್ಲಿ ಆಸ್ಪತ್ರೆಗೆ ಸಾಗಿಸಲೆಂದು ತಯಾರಾಗಿದ್ದರು. ಆದರೆ ಅದಾಗಲೇ ಅವರ ಸಾವು ಕೂಡ ಆಗಿತ್ತು ಎಂದು ಪುತ್ರ ಕರ್ಣ ಬೇಸರ ವ್ಯಕ್ತಪಡಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)