ನ.19ರಂದು ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸ.ಸಂಘದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ

0
267

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ.ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ.ಉಡುಪಿ, ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ನಿ. ಕಿರಿಮಂಜೇಶ್ವರ ಹಾಗೂ ಸಹಕಾರ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಯುವಜನ, ಮಹಿಳಾ ಮತ್ತು ಅಬಲ ವರ್ಗದವರಿಗಾಗಿ ಸಹಕಾರ ಸಂಸ್ಥೆಗಳು ದಿನ, ಕಾರ್ಯಕ್ರಮ ನ.19ರಂದು ಬೆಳಗ್ಗೆ ಗಂಟೆ 10.30ಕ್ಕೆ ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ, ಬೆಂಗಳೂರು ಇದರ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಅನ್ನಪೂರ್ಣ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕಿ ಪ್ರಮೀಳಾ ಜೆ.ವಾಜ್ಝ್ ದಿಕ್ಷೂಚಿ ಭಾಷಣ ಮಾಡಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ, ಜಿ.ಪಂ.ಸದಸ್ಯೆ ಗೌರಿ ದೇವಾಡಿಗ, ತಾ.ಪಂ.ಸದಸ್ಯೆ ಶ್ಯಾಮಲಾ ಕುಂದರ್, ದ.ಕ.ಸ. ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ, ಉಡುಪಿ ಸಹಕಾರ ಸಂಘಗಳ ಪ್ರಭಾರ ಉಪ ನಿಬಂಧಕ ಪ್ರವೀಣ್‍ಕುಮಾರ್ ನಾಯಕ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್‍ಕುಮಾರ್ ಎಸ್.ವಿ. ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)