ನ.19ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ.ನಿ.ಉಪ್ಪುಂದ 67ನೇ ಸಹಕಾರಿ ಸಪ್ತಾಹ, ಕೊರೋನಾ ವಾರಿಯರ್ಸ್‍ಗೆ ಗೌರವಾರ್ಪಣೆ

0
326

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ.ಉಪ್ಪುಂದ ಇದರ ವತಿಯಿಂದ 67ನೇ ಸಹಕಾರಿ ಸಪ್ತಾಹ ಸಮಾರಂಭ ನ.19ರಂದು ಮಧ್ಯಾಹ್ನ 3ಗಂಟೆಗೆ ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಕೊರೋನಾ ವಾರಿಯರ್ಸ್ ವೈದ್ಯಾ„ಕಾರಿಗಳಿಗೆ ಗೌರವಾರ್ಪಣೆ ಹಾಗೂ ಕೊರೋನಾ-19 ಲಾಕ್‍ಡೌನ್ ಸಂದರ್ಭದಲ್ಲಿರುವ ಸಂಘದ ಸ್ವ-ಸಹಾಯ ಸಂಘದ ಸಾಲಗಳಿಗೆ ಬಡ್ಡಿ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ಸಂಘದ ಹಿರಿಯ ಸದಸ್ಯ ಎಚ್.ಹೆರಿಯಣ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಪ್ರೇಮಾನಂದ, ಕಿರಿಮಂಜೇಶ್ವರ ಕೇಂದ್ರದ ವೈದ್ಯಾ„ಕಾರಿ ನಿಶಾ ರೈಬೆಲ್ಲೋ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)