ರಕ್ಷಿತ ಕುಮಾರ ವಂಡ್ಸೆಯವರಿಂದ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ ವಿತರಣೆ

0
327

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಉಡುಪಿ ಸ್ವಚ್ಚ ಭಾರತ ಫ್ರೆಂಡ್ಸ್ ಸದಸ್ಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಹಳೆ ವಿದ್ಯಾರ್ಥಿ ಮಣಿಪಾಲ ಆರೋಗ್ಯ ಕಾರ್ಡ ಅಧಿಕೃತ ಪ್ರತಿನಿಧಿ ರಕ್ಷಿತ ಕುಮಾರ ವಂಡ್ಸೆಯವರು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಿತ ನಾರಾಯಣ ವಿಶೇóಷ ಮಕ್ಕಳ ಶಾಲೆಯ ವಿದ್ಯಾರ್ಥೀಗಳಿಗೆ ಮಣಿಪಾಲ ಆರೋಗ್ಯ ಕಾರ್ಡುಗಳನ್ನು ದಿನಾಂಕ 27-11-2020 ರಂದು ರಕ್ಷಿತ ಕುಮಾರ ವಂಢ್ಸೆಯವರು ಸುಮಾರು 37 ಮಕ್ಕಳಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡುಗಳನ್ನು ವಿತರಣೆ ಮಾಡಲಾಯಿತು.

ಮಣಿಪಾಲ ಆರೋಗ್ಯ ಕಾರ್ಡುಗಳನ್ನು ಈ ಹಿಂದೆ ಉಡುಪಿ ಸಂತೆಕಟ್ಟೆಯಲ್ಲಿರುವ ಕೃಷ್ಣಾನುಗ್ರಹ ಅರ್ಹಸಂಸ್ಥೆ ಮತ್ತು ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೆ ಉಚಿತವಾಗಿ ನೀಡಲಾಗಿದೆ. ತಮ್ಮ ದುಡಿಮೆಯ ಸ್ವಲ್ಪ ಹಣವನ್ನು ಪ್ರತಿ ವರ್ಷ ಇಂತಹ ವಿಶೇಷ ಮಕ್ಕಳ ಶಾಲೆ ಸಂಸ್ಥೆಗೆ ಕೊಡುವ ಉದ್ದೇಶವಾಗಿರುತ್ತದೆ.

ಈ ಸಂದರ್ಭದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ ತಲ್ಲೂರು ,ಟ್ರಸ್ಟಿಯಾದ ಮನೋರಮ ತಲ್ಲೂರು, ಶಿಕ್ಷಕರು , ಪ್ರಾಂಶುಪಾಲರು , ಸಂಸ್ಥೆಯ ಚಂದ್ರಶೇಖರ , ಶಿಕ್ಷಕೇತರ ಸಿಬ್ಬಂದಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)