ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಬೈಂದೂರು ಶಾಖೆಯ “ನೂತನ ಕಟ್ಟಡ”ಕ್ಕೆ ಸ್ಥಳಾಂತರ ಸಮಾರಂಭ

0
326

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಬೈಂದೂರು ಶಾಖೆಯು ನೂತನ ಕಟ್ಟಡ “ಮಂಜುಶ್ರೀ ಬಿಲ್ಡಿಂಗ್”ಗೆ ಸ್ಥಳಾಂತರ ಸಮಾರಂಭ ಜರುಗಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಬ್ಯಾಂಕಿನ ಮಂಗಳೂರು ಪ್ರಾದೇಶಿಕ ಕಛೇರಿಯ ವ್ಯವಸ್ಥಾಪಕರಾದ ಶ್ರೀ ಸೂರ್ಯನಾರಾಯಣ ರಾವ್‍ರವರು ನೆರವೇರಿಸಿದರು. ಅವರು ತಮ್ಮ ಭಾಷಣದಲ್ಲಿ ಬ್ಯಾಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮತ್ತು ಶಾಖೆಯ ಪ್ರಗತಿ ಬಗ್ಗೆ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಟ್ಟಡದ ಮಾಲೀಕರಾದ ಶ್ರಿ ಮಂಜುನಾಥ ಶೆಟ್ಟಿಯವರು ಮಾತನಾಡಿ ಬ್ಯಾಂಕಿನ ಸೇವೆಯನ್ನು ಕೊಂಡಾಡಿದರು ಮತ್ತು ಸಾರ್ವಜನಿಕರಿಗೆ ಈ ಬ್ಯಾಂಕಿನಲ್ಲಿ ತಮ್ಮ ವ್ಯವಹಾರ ನಡೆಸುವಂತೆ ಹೇಳಿದರು. ಮತ್ತೋರ್ವ ಮುಖ್ಯ ಅತಿಥಿಗಳಾದ ಶ್ರೀ ವಿಠಲರವರು ಆರ್ಥಿಕ ಸಾಕ್ಷರತೆಯ ಬಗ್ಗೆ ವಿಸ್ತøತ ಮಾಹಿತಿ ನೀಡಿ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಖೆಯ ಭದ್ರತಾ ಕೋಶದ ಸೌಲಭ್ಯ ಉದ್ಘಾಟಿಸಿ ಸಾಂಕೇತಿಕವಾಗಿ ಕೀಲಿಕೈ ಗ್ರಾಹಕರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಗುರುನಾಥ ಭಟ್ ನಡೆಸಿಕೊಟ್ಟರು. ಶಾಖಾ ವ್ಯವಸ್ಥಾಪಕರಾದ ಶ್ರಿ ಸುರೇಶ್ ಕುಮಾರ್ ಉಪಾಧ್ಯ ಸ್ವಾಗತಿಸಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)