ಭಾರತೀಯ ಜನತಾ ಪಾರ್ಟಿ ಬೈಂದೂರು ವತಿಯಿಂದ ಅಭಿನಂದನಾ ಕಾರ್ಯಕ್ರಮ

0
318

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು: ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಹಾಗೂ ಭಾರತೀಯ ಜನತಾ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿದ ಅವರು ಎಲ್ಲಾ ಕಾರ್ಯಕರ್ತರ ಪರಿಶ್ರಮದದಿಂದ ಈ ಗೆಲವು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಬಿಜೆಪಿ ಪಕ್ಷ ಹೆಮ್ಮರವಾಗಿ ಬೆಳೆಯುತ್ತಿದೆ ಎನ್ನವುದಕ್ಕೆ ಗ್ರಾಮ ಪಂಚಾಯತ್ ಚುನಾವಣೆಯ ಪಲಿತಾಂಶವೇ ಸಾಕ್ಷಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಬೈಂದೂರು ಕ್ಷೇತ್ರದ ಶಾಸಕರು ಮಾತನಾಡಿ ಕಳೆದ ಅವದಿಯಲ್ಲಿ 14 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಆಡಳಿತ ನೀಡಿದ್ದಾರೆ ಈ ಬಾರಿ 31 ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಮುನ್ನೆಡೆ ಸಾಧಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಕ್ಲಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಭಾಶ್ ಶೆಟ್ಟಿ ಹೊಳ್ಮಗೆ ಹಾಗೂ ಅವರ ಬೆಂಬಗಲಿಗರು ಚಿತ್ತೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಣ್ಣಪ್ಪ ನಾಯ್ಕ ಬಿಜೆಪಿ ಸೇರ್ಪಡೆಗೊಂಡರು.

ರಾಜ್ಯ ಅಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಜಿ.ಪಂ ಸದಸ್ಯರಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ, ಸ್ಥಾಯಿ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ಬಾಲಚಂದ್ರ ಭಟ್, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ, ಮೋರ್ಚಾಗಳ ಪ್ರಮುಖರಾದ ಶರತ್ ಕುಮಾರ್ ಶೆಟ್ಟಿ, ಆನಂದ ಖಾರ್ವಿ, ಸಂತೋಷ ಪೂಜಾರಿ, ಸಂತೋಷ ಮಡಿವಾಳ, ಗೋಪಾಲ ಕಾಂಚನ್, ಭಾಗೀರಥಿ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ ಯೋಜನಾ ಆಯೋಗದ ಸದಸ್ಯೆ ಪ್ರಿಯದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜೆಡ್ಡು ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)