ಜೆಸಿಐ ಉಪ್ಪುಂದದ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ

0
350

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಜೆಸಿಐ ಭಾರತದ ನಿರ್ದೇಶನದಂತೆ ಜೆಸಿಐ ಉಪ್ಪುಂದದ ವತಿಯಿಂದ ಇಂದು ರಾಷ್ಟ್ರೀಯ ಭಾವೈಕ್ಯತೆಯ ದಿನಾಚರಣೆಯನ್ನು ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪುರುಷೋತ್ತಮದಾಸ್ ವಹಿಸಿದ್ದರು.

ಈ ಸಂಧರ್ಭದಲ್ಲಿ ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್ ಮಾತನಾಡಿ ನಮ್ಮ ದೇಶದಲ್ಲಿ ಬಹಳ ವರ್ಷಗಳಿಂದ ಇದ್ದಂತಹ ಒಳ್ಳೆಯ ಸುಮಧುರ ಭಾವೈಕ್ಯತೆಯ ಮನೋಭಾವವನ್ನು ಮುಂದಿನ ದಿನಗಳಲ್ಲಿ ಕೂಡಾ ನಮ್ಮ ದೇಶದಲ್ಲಿ ತರಬೇಕು ಎನ್ನುವ ಕಾರಣಕ್ಕಾಗಿ ಜೆಸಿಐ ಭಾರತ ಹಲವಾರು ವರ್ಷಗಳಿಂದ ರಾಷ್ಟ್ರೀಯ ಭಾವೈಕ್ಯತೆಯ ದಿನಾಚಾರಣೆಯನ್ನು ಆಚರಿಸಿಕೊಂಡು ಬರುತ್ತಿದೆ ಎಂದರು.

ಜೆಸಿಐ ವಲಯ 15ರ ಉಪಾಧ್ಯಕ್ಷರಾದ JFM ದೇವರಾಯ ದೇವಾಡಿಗ ಎಲ್ಲಾ ವಿದ್ಯಾರ್ಥಿಗಳಿಗೆ ಭಾವೈಕ್ಯತೆಯ ಪ್ರಮಾಣವಚನ ಬೋಧಿಸಿದರು.ಈ ಕಾರ್ಯಕ್ರಮದಲ್ಲಿ ಪ್ರಾಮಾಣಿಕತೆಯ ಅಂಗಡಿ ತೆರೆದಿಟ್ಟಿದ್ದು ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಹಣ ಕೊಟ್ಟು ವಸ್ತುಗಳನ್ನು ತೆಗೆದುಕೊಂಡರು.ವೇದಿಕೆಯಲ್ಲಿ ಪೂರ್ವಾಧ್ಯಕ್ಷರಾದ ಪುರಂದರ ಖಾರ್ವಿ,ಉದಯ್ ಡಿ ಆರ್,PPP ಶ್ರೀಗಣೇಶ್ ಗಾಣಿಗ, JC.ಮದುಕರ್ ದೇವಾಡಿಗ, JC ಗೌರೀಶ್ ಹುದಾರ್ ಶಾಲಾ ಉಪಪ್ರಾಂಶುಪಾಲರಾದ ಸತ್ಯನಾರಾಯಣ, ದೈಹಿಕ ಶಿಕ್ಷಕರಾದ ಮಂಜುನಾಥ್ ಹಾಗೂ ಶಾಲಾಶಿಕ್ಷಕರು ಉಪಸ್ಥಿತರಿದ್ದರು.

JFM ನರಸಿಂಹ ದೇವಾಡಿಗ ಅತಿಥಿಗಳನ್ನು ಸ್ವಾಗತಿಸಿ , ವಂದಿಸಿದರು.

ಕಾರ್ಯಕ್ರಮದಲ್ಲಿ ಕೋವಿಡ್ 19 ನಿಯಮಾವಳಿಯಂತೆ ವಿದ್ಯಾರ್ಥಿಗಳು ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡರು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)