ಬಿಜೂರು ಗ್ರಾ.ಪಂ. ಅಧ್ಯಕ್ಷರಾಗಿ ರಮೇಶ ದೇವಾಡಿಗ, ಉಪಾಧ್ಯಕ್ಷರಾಗಿ ಶ್ರೀಮತಿ ಶೆಟ್ಟಿ ಅವಿರೋಧವಾಗಿ ಆಯ್ಕೆ

0
396

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ :  ಬಿಜೂರು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾಗಿ ರಮೇಶ ವಿ. ದೇವಾಡಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶ್ರೀಮತಿ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ರಮೇಶ ದೇವಾಡಿಗ 3ನೇ ಭಾರೀ ಚುನಾವಣೆಯಲ್ಲಿ ವಿಜೇತರಾಗಿದ್ದು, ಬಿಜೂರು ಶ್ರೀ ನಂದಿಕೇಶ್ವರ ಯುವಕ ಮಂಡಲ ರಿ.ಇದರ ಅಧ್ಯಕ್ಷರಾಗಿದ್ದಾರೆ. ದೇವಾಡಿಗ ಸಮಾಜದ ಚಟುವಟಿಕೆಯಲ್ಲಿ ಗುರುತಿಸಿಕೊಂಡಿರುವ ಇವರು ಸುಮಾರು 20ವರ್ಷಗಳ ಕಾಲ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯೆಯಾಗಿದ್ದಾರೆ. ಬಿಜೂರು ಸರಕಾರಿ ಶಾಲೆಯಲ್ಲಿ ಎಸ್‍ಡಿಎಂಸಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ತನ್ನ ಆಯ್ಕೆಗೆ ಸಹಕರಿಸಿದ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಬÉೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಪ್ರೀಯದರ್ಶಿನಿ ದೇವಾಡಿಗ ಹಾಗೂ ಗ್ರಾಮದ ಪ್ರಮುಖರಾದ ವಿರೇಂದ್ರ ಶೆಟ್ಟಿ ಇವರಿಗೆ ಕೃತಜತೆಗಳನ್ನು ತಿಳಿಸಿದ್ದಾರೆ.
ಶ್ರೀಮತಿ ಶೆಟ್ಟಿ ಮೊದಲ ಬಾರಿಗೆ ವಿಜೇತರಾಗಿದ್ದರು.

ಬಿಜೂರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನಕ್ಕೆ 2ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)