ಕೆರ್ಗಾಲ್ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

0
799

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಕೆರ್ಗಾಲ್ ಗ್ರಾಮ ಪಂಚಾಯತ್‍ನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಾಧವ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಶಾರದ ಪೂಜಾರಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿ ಅಭ್ಯರ್ಥಿ ಮಾಧವ ದೇವಾಡಿಗ 7 ಮತ ಪಡೆದುಕೊಂಡಿದ್ದಾರೆ. ಕಾಂಗ್ರಸ್ ಬೆಂಬಲಿ ಅಭ್ಯರ್ಥಿ 5 ಮತ ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು 6-6 ಸಮಾನ ಮತಗಳನ್ನು ಪಡೆದಿದ್ದರು. ಚೀಟಿ ಎತ್ತುವಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾರದ ಪೂಜಾರಿ ಆಯ್ಕೆಯಾಗುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು.

ಗ್ರಾ.ಪಂ. ಚುನಾವಣೆಯಲ್ಲಿ ಒಟ್ಟು 12 ಸ್ಥಾನಗಳಲ್ಲಿ 5 ಬಿಜೆಪಿ, 6 ಕಾಂಗ್ರಸ್, 1ಸ್ಥಾನಕ್ಕೆ ಆವಿರೋಧವಾಗಿ ಆಯ್ಕೆಯಾಗಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)