ಬಿಜೂರು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0
1369

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (2) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಉಪ್ಪುಂದ : ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಏ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಬಿಜೂರು ಮಹಾಬಲ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಕಾರ್ಯ ನೆರವೇರಿತು.

ಏ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಏ.15ರಂದು ಬೆಳಗ್ಗೆ 11.15ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.16ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ.

ಎ.15ರಂದು ರಾತ್ರಿ ಗಂಟೆ8ಕ್ಕೆ ಹಿಂದೂಸ್ತಾನಿ ಗಾಯಕ ರಜತ್ ಕುಲಕರ್ಣಿ ಇವರಿಂದ ಭಜನ್ ಸಂಧ್ಯಾ ನಡೆಯಲಿದೆ. ಎ.16ರಂದು ಮಧ್ಯಾಹ್ನ 2.30ಕ್ಕೆ ಗಂಟೆಗೆ ಅತಿಥಿ ಕಲಾವಿದರ ಕೂಡುವಿಕೆಯಿಂದ ತೆಂಕುತಿಟ್ಟು ಯಕ್ಷಗಾನ ನಡೆಯಲಿದ್ದು, ರಾತ್ರಿ 8ಗಂಟೆಗೆ ಕೆಂಡ ಸೇವೆ ಹಾಗೂ ಮಹಾಮಂಗಳಾರತಿ ನಡೆಯಲಿರುವುದು. ಮೂರು ದಿನದ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಕೃಷ್ಣಮೂರ್ತಿ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಸ್ಥಳೀಯ ಭಕ್ತಾಧಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (2) ಖಂಡಿಸುವೆ (1) ಅಭಿಪ್ರಾಯವಿಲ್ಲ (0)