ಹೆಮ್ಮಾಡಿ ಎಸೆಎಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆ

0
605

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಅಂತಾರಾಷ್ರ್ಟೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬೈಂದೂರು ವಲಯ ಮಟ್ಟದಲ್ಲಿ ಲಯನ್ಸ್ ಕ್ಲಬ್ ನಾವುಂದ, ಜನತಾ ಪ್ರೌಢಶಾಲೆ ಹೆಮ್ಮಾಡಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮತ್ತು ವಂಡ್ಸೆ ಶಿಕ್ಷಣ ಸಂಯೋಜಕರ ಕೇಂದ್ರದ ವ್ಯಾಪ್ತಿಯ ಎಸೆಎಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆ ನಡೆಯಿತು.
ಕುಂದಾಪುರ ತಾ.ಪಂ.ಅಧ್ಯಕ್ಷೆ ಇಂದಿರಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ತ್ರಾಸಿ ಜಿ.ಪಂ.ಸದಸ್ಯೆ ಶೋಭಾ ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಟ್‍ಬೇಲ್ತೂರು ಗ್ರಾ.ಪಂ.ಅಧ್ಯಕ್ಷ ನಾಗರಾಜ ಪುತ್ರನ್, ಬೈಂದೂರು ಕ್ಷೇತ್ರ ಶಿಕ್ಷಣಾ„ಕಾರಿ ಜಿ.ಎಂ.ಮುಂದಿನಮನಿ, ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಭಾಸ್ಕರ್ ಶೆಟ್ಟಿ ವಕ್ವಾಡಿ, ಹಿರಿಯ ಶಿಕ್ಷಕ ದಿನಕರ ಎಸ್, ಟಿಪಿಇಐ ಚಂದ್ರಶೇಖರ ಶೆಟ್ಟಿ, ಇಸಿಒ ನಿತ್ಯಾನಂದ ಶೆಟ್ಟಿ, ಕೆಪಿಎಸ್ ವಂಡ್ಸೆ ಮುಖ್ಯ ಶಿಕ್ಷಕ ಸುಧಾಕರ ಶೆಟ್ಟಿ, ಬಿಆರ್‍ಪಿ ಮಂಜುನಾಥ ಶೇರುಗಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಮಹತ್ವ ಮತ್ತು ಮಹಿಳಾ ಸಬಲೀಕರಣದ ಕುರಿತು ಮಾಹಿತಿ ನೀಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ಎಸೆಎಸೆಲ್ಸಿ ವಿದ್ಯಾರ್ಥಿಗಳ ಹಾಗೂ ಪೆÇೀಷಕರೊಂದಿಗೆ ಸಂವಾದ ನಡೆಸಿ ತಾಯಂದಿರ ಜವಬ್ದಾರಿ ತಿಳಿಸಲಾಯಿತು.
ಬಿಆರ್‍ಪಿ ಕರುಣಾಕರ ಶೆಟ್ಟಿ ಸ್ವಾಗತಿಸಿದರು. ಬಿಆರ್‍ಪಿ ರಾಮಕೃಷ್ಣ ದೇವಾಡಿಗ ನಿರೂಪಿಸಿದರು. ವಂಡ್ಸೆ ಸಿಆರ್‍ಪಿ ನಾಗರಾಜ ಶೆಟ್ಟಿ ಎಂ. ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)