ಬಿಜೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಜಾನನ ನಾಯ್ಕ ನಿಧನ

0
913

12-6-2014-5
ಬೈಂದೂರು: ಬಿಜೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಜಾನನ ನಾಯ್ಕ (53) ಮೆದುಳಿನ ರಕ್ತಶ್ರಾವದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
   ಕುಮಟಾ ತಾಲೂಕಿನ ಅಗ್ರಗೋಣದವರಾದ ಅವರು ಕಾರ್ಕಳದ ಪೆರ್ವಾಜೆಯಲ್ಲಿ ಶಿಕ್ಷಕರಾಗಿ ಸೇವೆಸಲ್ಲಿಸಿ, ಕಳೆದ 7 ವರ್ಷಗಳಿಂದ ಬಿಜೂರು ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರ ಪಾರ್ಥಿವ ಶರೀರವನ್ನು ಬಿಜೂರು ಶಾಲಾ ಆವರಣದಲ್ಲ್ಲಿ ಇರಿಸಲಾಗಿದ್ದು, ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ಗ್ರಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ,  ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ ಬಿಜೂರು, ಹೂವಯ್ಯ ಪೂಜಾರಿ, ಗ್ರಾ.ಪಂ. ಸದಸ್ಯ ಶ್ರೀಧರ ಬಿಜೂರು, ಬೈಂದೂರು ವಲಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ನಾಯ್ಕ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಶಿಕ್ಷಕರು ಮೃತರ ಆತ್ಮಕ್ಕೆ ಅಂತಿಮ ನಮನ ಸಲ್ಲಿಸಿದರು. ಕುಂದಾಪುರ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಸ್. ಭಟ್ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.
 ಅವರಿಗೆ ಪತ್ನಿ ಬೈಂದೂರು ಸರಕಾರಿ ಪ್ರೌಢಶಾಲಾ ಶಿಕ್ಷಕಿ ನಳಿನಿ ನಾಯ್ಕ ಹಾಗೂ ಇಬ್ಬರು ಪುತ್ರಿಯರಿದ್ದಾರೆ.