ಕೋಟೇಶ್ವರ: ಹಣತೆ ಬೆಳಗಿ ನಂದಿತಾಗೆ ಶ್ರದ್ಧಾಂಜಲಿ

0
425

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

8-11-2014-4

ಕುಂದಾಪುರ: ಅನುಮಾನಸ್ಪದವಾಗಿ ಸಾವಿಗೀಡಾಗಿರುವ ತೀರ್ಥಹಳ್ಳಿ ಶಾಲಾ ವಿದ್ಯಾರ್ಥಿನಿ ನಂದಿತಾ ಅವರಿಗೆ ಕೋಟೇಶ್ವರದಲ್ಲಿ ಶುಕ್ರವಾರ ಸಂಜೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೋಟೇಶ್ವರ ಹಿಂದೂ ವಿದ್ಯಾರ್ಥಿವೇದಿಕೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಣತೆ ದೀಪ ಬೆಳಗಿಸಿ ನಂದಿತಾಗೆ ಶ್ರದ್ಧಾಂಜಲಿ ಅರ್ಪಿಸಿ ಶಾಂತಿ ಕೋರಲಾಯಿತು.

ಕೋಟೇಶ್ವರ ಹಿಂದೂ ವಿದ್ಯಾರ್ಥಿ ವೇದಿಕೆ ಸಂಚಾಲಕ ನಯನ್ ಪೂಜಾರಿ ಮಾತನಾಡಿ, ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಸಾಯಿಸಿದ್ದರೂ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸುವಲ್ಲಿ ಮೀನಮೇಷ ಎಣಿಸುತ್ತಿದೆ. ದುಷ್ಕರ್ಮಿಗಳಿಗೆ ರಕ್ಷಣೆ ಒದಗಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಅಭಿಷೇಕ್ ಅಂಕದಕಟ್ಟೆ, ವಿವೇಕ್‌ಕುಮಾರ್, ಹಿಂದೂ ಜಾಗರಣ ವೇದಿಕೆ ಮುಖಂಡರು ಇದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)