32 ಬಾಲಕಿಯರ ಮೇಲೆ ಅತ್ಯಾಚಾರಗೈದ ಶಿಕ್ಷಕನ ಬಂಧನ

0
618

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

8-11-2014-7

ಮಿಜೋರಾಂ: ಒಂದಲ್ಲ ಎರಡಲ್ಲ ಬರೋಬ್ಬರಿ 32 ಮಕ್ಕಳ ಮೇಲೆ ಅತ್ಯಾಚಾರವೆಸಗಿರುವ ಶಿಕ್ಷಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಶಿಕ್ಷಕನೊಬ್ಬ 32 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೀಜೋರಾಂನ ಚಾಂಫೈನ ಸೈಚಾಲ್ ಹಳ್ಳಿಯಲ್ಲಿ 32 ಮಕ್ಕಳ ಮೇಲೆ ಅತ್ಯಾಚಾರಗೈದಿರುವ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಲಾಲ್ ಮಿಂಗ್ ಮಾವಿಯಾ(30) ಬಂಧಿತ ಆರೋಪಿ. ಈತನ ವಿರುದ್ಧ ಅತ್ಯಾಚಾರಕ್ಕೊಳಗಾದ ಇಬ್ಬರು ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ಶಿಕ್ಷಕ, ಶಾಲೆಯ 32 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಹೇಳಿದ್ದಾನೆ.

ಕಳೆದ 3 ವರ್ಷಗಳಿಂದ 8ರಿಂದ 12 ವರ್ಷದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗಿ ಮಕ್ಕಳಿಗೆ ಶಿಕ್ಷಕ ಬೆದರಿಕೆ ಹಾಕಿದ್ದನು. ಆರೋಪಿ ವಿರುದ್ಧ ಎಫ್‌ಐ‌ಆರ್ ದಾಖಲಿಸಿದ್ದು, ಜೈಲಿಗೆ ಕಳುಹಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)