ಮೈಸೂರು ದಸರಾ : ಚಿನ್ನದ ಅಂಬಾರಿಯಲ್ಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿದ್ದರಾಮಯ್ಯ

0
1255

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

m dasara 9

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು.

m dasara 14

m dasara 3

ಅರಮನೆ ಆವರಣದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾಗಿರುವ ವೇದಿಕೆಗೆ ತೆರದ ಜೀಪ್ ನಲ್ಲಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ ನೀಡಿದರು. ಈ ವೇಳೆ ಮೈಸೂರು ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್, ಸಚಿವರಾದ ಎಚ್ ಎಸ್ ಮಹದೇವ ಪ್ರಸಾದ್ ಮತ್ತು ಸಚಿವೆ ಉಮಾಶ್ರೀ ಅವರು ಜೊತೆಗಿದ್ದರು.

m dasara 1

m dasara 2

m dasara 5

ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿ‌ಎಂ
ಇದಕ್ಕೂ ಮೊದಲು ಅಂಬಾವಿಲಾಸ ಅರಮನೆಯ ಉತ್ತರದಲ್ಲಿರುವ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 12.07ರಿಂದ 12.21ರವರೆಗೆ ಸಲ್ಲುವ ಧನುರ್ ಲಗ್ನದಲ್ಲಿ ಸಿ‌ಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಧ್ಯಾಹ್ನ 12.30ರಿಂದ ಆರಂಭವಾಗುವ ಮಕರ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಮತ್ತು ಮೈಸೂರು ಅರಸರ ಅಧಿದೇವತೆ ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.

ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ‘ಈ ಬಾರಿ ಬರ ಮತ್ತು ರೈತರ ಆತ್ಮಹತ್ಯೆಗಳು ಹೆಚ್ಚಿದ ಕಾರಣ ದಸರಾವನ್ನು ಸರಳವಾಗಿ ಆಚರಿಸಲಾಯಿತು. ಆದರೆ ಜನರ ಸಂಭ್ರಮ ಕಡಿಮೆಯಾಗಿಲ್ಲ’ ಎಂದರು .

‘ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದರು ಹಿಂಗಾರು ಮಳೆ ಉತ್ತಮವಾಗುತ್ತಿದೆ. ನಾಡಿನ ರೈತರಿಗೆ ಚಾಮುಂಡೇಶ್ವರಿ ದೇವಿ ಆತ್ಮಸ್ಥೈರ್ಯ ನೀಡಲಿ, ನಾಡಿನ ಸಮಸ್ತ ಜನತೆಗೆ ಒಳ್ಳೆಯದು ಮಾಡುವಂತೆ ಪ್ರಾರ್ಥನೆ ಮಾಡುತ್ತೇನೆ’ ಎಂದು ಸಿದ್ಧರಾಮಯ್ಯ ಹೇಳಿದರು.

m dasara 11

m dasara 7

m dasara 10

750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅರ್ಜುನ ಇತರ ಸಾಲಂಕೃತ ಆನೆಗಳೊಂದಿಗೆ ಮೆರವಣಿಗೆಯಲ್ಲಿ ಗತ್ತು ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಮೆರವಣಿಗೆಯಲ್ಲಿ ಈ ಬಾರಿ ಅತ್ಯಾಕರ್ಷಕ, ಸಂದೇಶಗಳಿಂದ ಕೂಡಿರುವ 23 ಸ್ತಬ್ಧಚಿತ್ರಗಳು ಹಾಗೂ 33 ಕಲಾತಂಡಗಳು ಭಾಗವಹಿಸಿವೆ.

ಅರಮನೆಯ ರಾಜಬೀದಿಗಳಲ್ಲಿ ಸಾವಿರಾರು ಜನರು ಜಂಬೂ ಸವಾರಿ ಮೆರವಣಿಗೆ ವೀಕ್ಷಣೆಗೆ ಸಾಲು ಗಟ್ಟಿ ನಿಂತಿದ್ದಾರೆ. ಅರಮನೆಯಿಂದ ಹೊರಟ ಮೆರವಣಿಗೆ ಬನ್ನಿಮಂಟಪ ತಲುಪಲಿದೆ. ಸಂಜೆ 7 ಗಂಟೆಗೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯಿತಿನಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಾವಿರಾರು ಪ್ರವಾಸಿಗರು ದಸರಾ ವಿಕ್ಷಣೆಗಾಗಿ ಮೈಸೂರಿಗೆ ಆಗಮಿಸಿದ್ದಾರೆ. ಎಲ್ಲೆಡೆಪೊಲೀಸರು ವ್ಯಾಪಕ ಭದ್ರೆ ಕೈಗೊಂಡಿದ್ದಾರೆ. ಸುಮಾರು 5,000 ಕ್ಕೂ ಹೆಚ್ಚು ಪೊಲೀಸರು ಕರ್ತವ್ಯ ನಿರತರಾಗಿದ್ದಾರೆ.

m dasara 15

m dasara 12

m dasara 13

m dasara 8

ಈ ವೇಳೆ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸಹೋದ್ಯೋಗಿಗಳು, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿ ಇನ್ನಿತರ ಗಣ್ಯರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾದರು. 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತಿರುವ ಅರ್ಜುನ ನೇತೃತ್ವದ ಗಜಪಡೆ 5.5 ಕಿ.ಮೀ. ದೂರವನ್ನು ಕ್ರಮಿಸಿ ಬನ್ನಿಮಂಟಪ ತಲುಪಲಿದೆ. ಚಾಮುಂಡೇಶ್ವರಿ ಮೂರ್ತಿಯನ್ನು ಇರಿಸಲಾಗುವ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುವ ಅರ್ಜುನನೊಂದಿಗೆ ಕುಮ್ಕಿ, ನಿಶಾನೆ ಹಾಗೂ ನೌಪತ್ ಆನೆಗಳು ಹೆಜ್ಜೆ ಹಾಕುತ್ತಿವೆ. ಅರಮನೆ ಉತ್ತರ ದ್ವಾರದಿಂದ ಹೊರಡುವ ಮೆರವಣಿಗೆ ಚಾಮರಾಜೇಂದ್ರ ಒಡೆಯರ್ ವೃತ್ತ, ಕೆ.ಆರ್.ವೃತ್ತ ಮೂಲಕ ಹಾದು ಸಯ್ಯಾಜಿರಾವ್ ರಸ್ತೆಯಲ್ಲಿ ಸಾಗಿ ಬನ್ನಿಮಂಟಪ ಸೇರಲಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)