ಸುಕ್ಮಾ ಎನ್ಕೌಂಟರ್: ಇಬ್ಬರು ಸಿಆರ್ಪಿಎಫ್ ಪೊಲೀಸರು ಸಾವು

0
1154

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

4-03-2016-10

ಸುಕ್ಮಾ(ಛತ್ತೀಸ್ ಗಢ): ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿ‌ಆರ್ಪಿ‌ಎಫ್) ಸಿಬ್ಬಂದಿ ಮೃತಪಟ್ಟಿದ್ದು, 14 ಮಂದಿಗೆ ಗಾಯಗಳಾಗಿವೆ.

ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಕಳೆದ ರಾತ್ರಿ 12.30 ಸುಮಾರಿಗೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದೆ.

ಮಾವೋವಾದಿಗಳಿಗಾಗಿ ಭದ್ರತಾ ಸಿಬ್ಬಂದಿ, ಸಿ‌ಆರ್ಪಿ‌ಎಫ್ ಹಾಗೂ ರಾಜ್ಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)