ಗಂಗೊಳ್ಳಿ : ನವಗ್ರಹ ವಾಸ್ತು ಪುರಸ್ಪರ ಶ್ರೀ ಮಹಾವಿಷ್ಣು ಯಾಗದ ಮಹಾಪೂರ್ಣಾಹುತಿ

0
523

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

1-06-2016-8

ಬೈಂದೂರು: ಯ ಆಪ್ತ ಇಷ್ಟ ಮಿತ್ರ ಮಂಡಳಿ ವತಿಯಿಂದ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಸಹಕಾರದೊಂದಿಗೆ ಶ್ರೀ ವೆಂಕಟರಮಣ ದೇವರ ಅನುಗ್ರಹ ಪ್ರಾಪ್ತಿಗಾಗಿ ತನ್ಮೂಲಕ ಶ್ರೀದೇವರ ಭಜಕರ ಶ್ರೇಯೋಭಿವೃದ್ಧಿಗಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ನವಗ್ರಹ ವಾಸ್ತು ಪುರಸ್ಪರ ಶ್ರೀ ಮಹಾವಿಷ್ಣು ಯಾಗದ ಮಹಾಪೂರ್ಣಾಹುತಿ ಜರಗಿತು.

1-06-2016-7

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಯಜ್ಞದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬಳಿಕ ಶ್ರೀದೇವರಿಗೆ ಮಹಾಪೂಜೆ, ರಾತ್ರಿ ಶ್ರೀದೇವರ ಪಲ್ಲಕಿ ಉತ್ಸವ ಮೊದಲಾದವುಗಳು ವಿಜೃಂಭಣೆಯಿಂದ ಜರಗಿತು.

ಆಪ್ತ ಇಷ್ಟ ಮಿತ್ರ ಮಂಡಳಿ ಅಧ್ಯಕ್ಷ ಎಂ.ರಾಮಕೃಷ್ಣ ಪೈ ದಂಪತಿಗಳ ಯಜಮಾನಿಕೆಯಲ್ಲಿ ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವಸಂತ ಭಟ್, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ವೈದಿಕರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಆಪ್ತ ಇಷ್ಟ ಮಿತ್ರ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿ‌ಎಸ್‌ಬಿ ಸಮಾಜ ಬಾಂಧವರು ಹಾಗೂ ಭಕ್ತರು ಉಪಸ್ಥಿತರಿದ್ದರು.

 

ನರಸಿಂಹ ನಾಯಕ್…

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)