ಕುಮಟಾದ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ತಪ್ಪಿದ ದುರಂತ

0
279

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

28-10-2016-2

ಕುಮಟಾ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಉರುಳಿ ಬಿದ್ದ ಪರಿಣಾಮ ಕೆಲ ಗಂಟೆಗಳ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು.

ಗ್ಯಾಸ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರಿ ಅನಾಹುತಗಳನ್ನೇ ಸೃಷ್ಟಿಸುತ್ತಿದ್ದು ಇತ್ತಿಚೆಗೆ ಕುಮಟಾದ ಬಳಿ ಬರ್ಗಿ ಎಂಬಲ್ಲಿ ಟ್ಯಾಂಕರ್ ಉರುಳಿ ಭಾರಿ ಬೆಂಕಿ ಹೊತ್ತಿಕೊಂಡು ಹಲವು ಸಾವು ನೋವುಗಳಿಗೆ ಕಾರಣವಾಗಿದ್ದನ್ನು ಸ್ಮರಿಸಬಹುದಾಗಿದೆ.

ಹಿಂದುಸ್ಥಾನ ಪೆಟ್ರೋಲಿಯಂ ಕಂಪನಿಗೆ ಸೇರಿದೆ ಎನ್ನಲಾದ ಗ್ಯಾಸ್ ಟ್ಯಾಂಕರ್ ಕುಮಟಾ ತಾಲೂಕಿನ ಬೆಟ್ಕುಳಿಯಲ್ಲಿ ಹೆದ್ದಾರಿ 66 ರಲ್ಲಿ ಉರುಳಿ ಬಿದ್ದಿದ್ದು ಸುದೈವವಶಾತ್ ಯಾವುದೇ ದುರ್ಘಟನೆ ಸಂಭವಿಸಲಿಲ್ಲ. ಚಾಲಕನ ತಲೆಗೆ ಪೆಟ್ಟು ಬಿದ್ದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂಧಿಗಳು ಬಂದು ಕಾರ್ಯಚರಣೆ ಕೈಗೊಂಡರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)