ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ರಮೇಶ ಭಟ್ ಭೇಟಿ

0
333

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಫೆ.10: ಚಲನಚಿತ್ರ ಹಾಗೂ ಕಿರುತೆರೆಯ ಖ್ಯಾತ ನಟ ರಮೇಶ ಭಟ್ ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಶಾಲೆಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಶಾಲೆಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಚಲನಚಿತ್ರ ರಂಗದ ಬಗ್ಗೆ ಅನುಭವವನ್ನು ಹಂಚಿಕೊಂಡ ಅವರು ಶಾಲೆಯ ಉಪನ್ಯಾಸಕರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

BYN-Feb10-1-Ramesh Bhat & Silver Jubliee copy

ಚಲನಚಿತ್ರ ರಂಗದಲ್ಲಿ ಹೆಸರು ಪಡೆದುಕೊಂಡ ನಾನು ಉಡುಪಿ ಜಿಲ್ಲೆಯವನು ಎಂದು ಯಾರಿಗೂ ತಿಳಿದಿಲ್ಲ. ಈ ಪ್ರದೇಶಕ್ಕೆ ಬಂದು ಎಲ್ಲರೊಂದಿಗೆ ಸೇರಿ ನಮ್ಮ ಹಿಂದಿನ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದೇ ಒಂದು ಸಂತೋಷ. ಈ ಭಾಗದ ಜನರು ನೀಡುವ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ನಿವೃತ್ತ ಪ್ರಾಂಶುಪಾಲ ಆರ್.ಎನ್.ರೇವಣ್‍ಕರ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್, ಕಾಲೇಜಿನ ಉಪನ್ಯಾಸಕರು, ಸಹಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ನರಸಿಂಹ ನಾಯಕ್ ಉಪ್ಪುಂದ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)