ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಮಠದ ಶ್ರೀ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವ ಉದ್ಘಾಟನೆ

0
356

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಫೆ.10: ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಮಠದ ಶ್ರೀ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭ ಬುಧವಾರ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಜರಗಿತು.

BYN-Feb10-2-Ramesh Bhat & Silver Jubliee copy

 ವೇದಮೂರ್ತಿ ಚಂದ್ರಶೇಖರ ಸೋಮಯಾಜಿ ಕೋಟ ಅವರು ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಗಂಗೊಳ್ಳಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶಾರದಾ ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಟ್ಟಿಯಂಗಡಿ ಶ್ರೀ ಮಾರಲ ದೇವಿ ದೇವಸ್ಥಾನದ ಮೊಕ್ತೇಸರ ಮಂಜುನಾಥ ಭಟ್ ಶುಭ ಹಾರೈಸಿದರು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ಖಾರ್ವಿ, ಶಾಲೆಯ ಮುಖ್ಯ ಶಿಕ್ಷಕಿ ಸುಜಾತಾ ಕೆ., ಶ್ರೀ ಗಣೇಶೋತ್ಸವ ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಎಸ್.ಕೋಟಾನ್, ಕಾರ್ಯದರ್ಶಿ ಶಾಂತಿ ಅಶೋಕ್ ಉಪಸ್ಥಿತರಿದ್ದರು.

 ಶ್ರೀ ಗಣೇಶೋತ್ಸವ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಎನ್.ಖಾರ್ವಿ ಸ್ವಾಗತಿಸಿದರು. ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ನಾಗರಾಜ ಖಾರ್ವಿ ಲೈಟ್‍ಹೌಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ನಾಗರಾಜ ಖಾರ್ವಿ ಜಿ. ವಂದಿಸಿದರು.

ವರದಿ : ನರಸಿಂಹ ನಾಯಕ್ ಉಪ್ಪುಂದ

 

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)