ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಉದ್ಘಾಟನಾ ಸಮಾರಂಭ

0
480

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ಮಾ.19 : ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕರ ಶಿಕ್ಷಣ ಇಲಾಖೆ,ಇದರ 49ಲಕ್ಷ ರೂಪಾಯಿ ಅಂದಾಜು ವೆಚ್ಚದ ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿಯನ್ನು ಬೈಂದೂರಿನ ಅಭಿವೃದ್ದಿ ಹರಿಕಾರ ಎಂದೇ ಹೆಸರು ವಾಸಿಯಾಗಿರುವ ಶಾಸಕರು ಹಾಗೂ ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿಯವರು ಭಾನುವರ ಬೆಳಿಗ್ಗೆ ಯೋಜನಾನಗರದಲ್ಲಿ ನಿರ್ಮಿಸಿರುವ ನೂತನ ಕಛೇರಿಯನ್ನು ಉದ್ಘಾಟಿಸಿದರು.

byndoor 001 copy

ಇವರು ಉದ್ಘಾಟಿಸಿ ಬಳಿಕ ಮಾತನಾಡಿದರು ಸನ್ಮಾನ್ಯ ಶಾಸಕರಾದ ಕೆ.ಗೋಪಾಲ ಪೂಜಾರಿಯವರು ಈ ಕಟ್ಟಡಕ್ಕೆ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸಿಕೊಡುತ್ತೇನೆ. ಜನರಿಗೆ ಹಾಗೂ ಶಿಕ್ಷಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ವ್ಯವಸ್ಥೆಯನ್ನು ಮಾಡಿಸುತ್ತೇನೆ. ಎಲ್ಲಾ ಶಿಕ್ಷಕರು ನಿಮ್ಮದೇ ಕಟ್ಟಡ ಎಂದು ತಿಳಿದುಕೊಳ್ಳಬೇಕು. ಮುಂದಿನ ತಿಂಗಳಿನಲ್ಲಿ ಬೈಂದೂರು ತಾಲೂಕು ಕೇಂದ್ರವಾಗಿ ಘೋಷಣೆಯಾಗುತ್ತದೆ. ಕುಂದಾಪುರಕ್ಕೆ ಎಷ್ಟು ಗೌರವ ಇದೆಯೋ ಹಾಗೇ ಬೈಂದೂರಿಗೂ ಅಂತಹ ಗೌರವ ನೀಡುವ ಕಾರ್ಯವನ್ನು ಹಮ್ಮಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

byndoor 08

byndoor 044

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾ ಬೈಂದೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಟಿ.ಶಂಕರ್ ಪೂಜಾರಿ, ಶಿರೂರು ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟವಾಡಿ, ಕಂಬದಕೋಣೆ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಗೌರಿ ದೇವಾಡಿಗ,ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ ಎಸ್.ರಾಜು ಪೂಜಾರಿ, ಶಿರೂರು ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರಮೀಳಾ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ದೇವಾಡಿಗ, ಡಿ.ಡಿ.ಪಿ.ಐ ದಿವಾಕರ ಶೆಟ್ಟಿ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಶೆಟ್ಟಿ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಮೊದಲಾದರು ಉಪಸ್ಥಿತಿದ್ದರು.

byndoor02

byndoor055

ಮುಖ್ಯೋಪಾಧ್ಯಾಯರಾದ ನಾಗೇಶ್ ನಾಯ್ಕ ಸ್ವಾಗತಿಸಿದರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಓ.ಆರ್ ಪ್ರಕಾಶ್‍ಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಿಕ್ಷಕ ಜಿ.ಸುಬ್ರಹ್ಮಣ್ಯ ಗಾಣಿಗ ಉಪ್ಪುಂದ ಹಾಗೂ ಗಣಪತಿ ಹೋಬಳಿದಾರ್ ಕಾರ್ಯಕ್ರಮವನ್ನು ನಿರೂಪಿಸಿದರು, ಬೈಂದೂರು ಕ್ಷೇತ್ರ ಸಮನ್ವಯಾಧಿಕಾರಿಯಾದ ರವೂಪ್ ಧನ್ಯವಾದ ಸಮರ್ಪಣೆ ಮಾಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)