ಮುಂದುವರಿದ ವಲಸೆ ಪರ್ವ:ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಮಾಜಿ ಸಂಸದ ಎಂ. ಶಿವಣ್ಣ

0
991

ಮೈಸೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದನ್ನು ಕಾಂಗ್ರೆಸ್ ಗೆ ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ, ಇಂಥಹ ಪರಿಸ್ಥಿತಿಯಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ.

 shivanna-yeddi

 ಮಾಜಿ ಸಂಸದ ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ. ಶಿವಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

 ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅವರ ಜೊತೆ ಒಂದು ಸುತ್ತಿನ ಚರ್ಚೆ ನಡೆಸಿರುವ ಶಿವಣ್ಣ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಲಿದ್ದಾರೆ.

 ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನ ಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಶ್ರೀನಿವಾಸ್ ಪ್ರಸಾದ್ ಮತ್ತು ನಿರಂಜನ್ ಕುಮಾರ್ ಜಯ ಗಳಿಸಲಿದ್ದಾರೆ ಎಂದು ಎಂ. ಶಿವಣ್ಣ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

 ಕಾಂಗ್ರೆಸ್ ನಲ್ಲಿ ಹಿರಿಯ  ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿರುವ ಈಗಾಗಲೇ ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದು, ಉಪ ಚುನಾವಣೆ ಪ್ರಚಾರದ ವೇಳೆ ಪಕ್ಷ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ, ಕೆಪಿಸಿಸಿ ಹಿರಿಯರನ್ನು ಕಡೆಗಣಿಸುತ್ತಿದೆ ಎಂದು ದೂರಿದ್ದಾರೆ.