ರಾಜ್ಯದಾದ್ಯಂತ ಇಂದು ಪಲ್ಸ್ ಪೋಲಿಯೊ ಅಭಿಯಾನ

0
1074

ಬೆಂಗಳೂರು: ರಾಜ್ಯದಾದ್ಯಂತ ಭಾನುವಾರ ಪಲ್ಸ್ ಪೋಲಿಯೊ ಅಭಿಯಾನ ನಡೆಯುತ್ತಿದೆ.

WhatsApp-Image-2017-04-02-at-10.32.47-AM-696x498

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ತುಮಕೂರಿನಲ್ಲಿ ಸಂಸದ ಎಸ್. ಮುದ್ದಹನುಮೇಗೌಡರು ಮತ್ತು ಶಾಸಕ ಡಾ. ರಫೀಕ್‌ಅಹಮದ್ ಅವರು ಪ್ಲಸ್ ಪೋಲಿಯೊ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ೧.೪೦ ಲಕ್ಷ ಮಕ್ಕಳಿಗೆ ಇಂದು ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಲೋಕೇಶ್ ಕುಮಾರ್ ಹೇಳಿದ್ದಾರೆ.

ಭಾನುವಾರ ಫಲ್ಲ್ಸ್ ಪೋಲಿಯೋಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ವಲಸೆ ಬಂದು ಕೆಲಸ ಮಾಡುತ್ತಿರುವ ಮಕ್ಕಳನ್ನು ಹೆಚ್ಚಾಗಿ ಗುರುತಿಸಿ ಲಸಿಕೆ ನೀಡಲಾಗುತ್ತದೆ ಎಂದರು. ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಜಿಪಂ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ನವಜಾತ ಶಿಶುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.