ಕ್ರೀಡೆಯ ಮೂಲಕ ಯುವ ಸಮುದಾಯದ ಸಂಘಟನೆ ಸಾಧ್ಯವಾಗುತ್ತದೆ; ಡಾ.ಜಿ.ಶಂಕರ್.

0
633

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು,ಎ.10 : ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಮೊಗವೀರ ಸೌಹಾರ್ದಯುತ ಹೊನಲು ಬೆಳಕಿನ ಪಂದ್ಯಾಟ ಬೈಂದೂರಿನ  ಗಾಂಧಿ ಮೈದಾನದಲ್ಲಿ ಉದ್ಘಾಟನೆಗೊಂಡಿತು.

0904bdre1 copy

ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್‍ನ ಪ್ರವರ್ತಕ ಡಾ.ಜಿ.ಶಂಕರ್ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಕ್ರೀಡೆಯ ಮೂಲಕ ಯುವ ಸಮುದಾಯದ ಸಂಘಟನೆ ಸಾಧ್ಯವಾಗುತ್ತದೆ.ಕ್ರೀಡಾ ಪ್ರತಿಭೆಗಳಿಗೆ ವಿಪುಲವಾದ ಅವಕಾಶಗಳಿವೆ. ಮೊಗವೀರ ಯುವ ಸಂಘಟನೆ ವತಿಯಿಂದ ನಡೆಸಿದ ಕಬಡ್ಡಿ ಪಂದ್ಯಾಟದಲ್ಲಿ ಅನೇಕ ಪ್ರತಿಭೆಗಳಿಗೆ ಅವಕಾಶಗಳು ದೊರೆಯುತ್ತದೆ. ಸೂಕ್ತ ಕ್ರೀಡಾಳುಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮೂಲಕ ತರಬೇತಿ ನೀಡುವ ಬಗ್ಗೆ ಮಾತುಕತೆ ನಡೆಸಿದ್ದೇನೆ.ಕ್ರೀಡಾಳುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದರು.

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಅಧ್ಯಕ್ಷ ಗಂಗಾಧರ ಮೊಗವೀರ ಪಡುವರಿ ಅಧ್ಯಕ್ಷತೆ ವಹಿಸಿದ್ದರು.ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಎ.ಸುವರ್ಣ ಅಂಕಣವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಮುಂಬೈ ಮಾಜಿ ಅಧ್ಯಕ್ಷ ಮಹಾಬಲ ಕುಂದರ್, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅ„ಕಾರಿ ಜಗನ್ನಾಥ.ಕೆ, ಜಿಲ್ಲಾಧ್ಯಕ್ಷ ಗಣೇಶ ಕಾಂಚನ್, ಮೊಗವೀರ ಯುವ ಸಂಘಟನೆ ಬಗ್ವಾಡಿ ಹೋಬಳಿ ಅಧ್ಯಕ್ಷ ಕೆ.ಕೆ ಕಾಂಚನ್, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ ಹೆಮ್ಮಾಡಿ, ರಾಮ ಮೊಗವೀರ ಬೈಂದೂರು, ಮತ್ಸೋಧ್ಯಮಿ ರಾಮ ಮೊಗವೀರ ಅಳ್ವೆಗದ್ದೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಉದಯ ಕುಮಾರ್ ಹಟ್ಟಿಯಂಗಡಿ, ಆನಂದ ಮರಕಾಲ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಉದ್ಯಮಿ ಗೋಪಾಲ ಮೊಗವೀರರವರನ್ನು ಸಮ್ಮಾನಿಸಲಾಯಿತು.

ಮಾಜಿ ಜಿ.ಪಂ ಸದಸ್ಯ ಮದನ್ ಕುಮಾರ್ ಉಪ್ಪುಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕ್ರೀಡಾ ಕಾರ್ಯದರ್ಶಿ ಕೃಷ್ಣ ಮೊಗವೀರ ಸ್ವಾಗತಿಸಿದರು.ಪಾಂಡುರಂಗ ಮೊಗವೀರ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯದರ್ಶಿ ವಸಂತ ಬಿ.ತಗ್ಗರ್ಸೆ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)