ತಾಲೂಕು ಮಟ್ಟದ ಉಚಿತ ಆಯುಷ್ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಬೈಂದೂರು ಶಾಸಕ, ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು

0
356

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಶ್ರೀ ಸಂಗಮೇಶ್ವರ ದೇವಸ್ಥಾನ ನಾಯಕವಾಡಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ-ಗುಜ್ಜಾಡಿ ಮತ್ತು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಉಚಿತ ಆಯುಷ್ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಾಯಕವಾಡಿಯ ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಾನುವಾರ ನಡೆಯಿತು.

Gangolli

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ, ಸರಕಾರ ಆಯುಷ್ ಇಲಾಖೆ ಮೂಲಕ ಅನೇಕ ಯೋಜನೆಗಳನ್ನು ನೀಡಿದೆ. ಜನರು ಈ ಇಲಾಖೆಯ ಪ್ರಯೋಜನಗಳನ್ನು ಪಡೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಲು ಗಮನಹರಿಸಬೇಕು. ಆಯುರ್ವೇದ ಔಷಧ ಪದ್ಧತಿ ಕಡೆ ಹೆಚ್ಚು ಒಲವು ತೋರಬೇಕು ಎಂದರು.

ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ಸುರೇಂದ್ರ ಖಾರ್ವಿ ಗಂಗೊಳ್ಳಿ, ರಾಜು ದೇವಾಡಿಗ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಅಧ್ಯಕ್ಷ ಗಣೇಶ ಕುಮಾರ್ ಉಪಸ್ಥಿತರಿದ್ದರು.

ಈ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್ ಸ್ವಾಗತಿಸಿದರು. ಕಾಲ್ಥಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ.ಕಾರ್ಯಕ್ರಮ ನಿರೂಪಿಸಿದರು.

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)