ಮೇಲ್‍ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಮಂಜುನಾಥ ಸಾಲಿಯಾನ್ ಉದ್ಘಾಟಿಸಿದರು

0
330

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಮೇಲ್‍ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್‍ರವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ಅಂಗವಾಗಿ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಸಹಕಾರದೊಂದಿಗೆ ರಸಪ್ರಶ್ನೆ ಕಾರ್ಯಕ್ರಮ ಮೇಲ್‍ಗಂಗೊಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರಗಿತು.

gangolli 1

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲೆ ಸವಿತಾ ಸಮಾಜದ ಜಿಲ್ಲಾ ಸಂಘಟಕ ಮಂಜುನಾಥ ಸಾಲಿಯಾನ ಅವರು, ಯುವಕ ಮಂಡಲಗಳು ಸದಾ ಚಟುವಟಿಕೆಗಳಿಂದ ಕೂಡಿರಬೇಕು. ಮನುಷ್ಯ ಜೀವನದ ಸರ್ವತೋಮುಖ ಅಭಿವೃದ್ಧಿಗೆ ಯುವಕ ಮಂಡಲಗಳು ಸಹಕಾರಿಯಾಗುತ್ತದೆ. ಕಳೆದ 30 ವರ್ಷಗಳಿಂದ ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ ಗಂಗೊಳ್ಳಿ ಡಾ.ಬಿ.ಆರ್.ಅಂಬೇಡ್ಕರ ಯುವಕ ಮಂಡಲವು ಸಮಾಜಕ್ಕೆ ಹಾಗೂ ದೇಶಕ್ಕೆ ನೀಡಿದ ಕಾರ್ಯಕ್ರಮಗಳು ಶ್ಲಾಘನೀಯ ಎಂದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಬಿ.ಮಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಯುವಕ ಮಂಡಲದ ಅಧ್ಯಕ್ಷ ಪ್ರಸಾದ ಸ್ವಾಗತಿಸಿದರು. ಗೌರವ ಅಧ್ಯಕ್ಷ ಭಾಸ್ಕರ ಎಚ್.ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಶಿದೀಪ ಕೆ. ವಂದಿಸಿದರು.

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)