ಬೀದರ್‍ನಲ್ಲಿ 4ನೇ ಅಂತಸ್ತಿನ ಕಟ್ಟಡದಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

0
1251

ಬೀದರ್: ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಬೀದರ್ ನ ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಹಾಸ್ಟೆಟ್ ಕಟ್ಟಡ ನಾಲ್ಕನೇ ಅಂತಸ್ತಿತಿನಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
Kirthi
 ಕಣ್ಣೂರು ಮೂಲದ ವಿದ್ಯಾರ್ಥಿನಿ 23 ವರ್ಷದ ಕೀರ್ತಿ ಎಂದು ಗುರುತಿಸಲಾಗಿದ್ದು, ಕೀರ್ತಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಹಿಂದಿನ ಪರೀಕ್ಷೆಯಲ್ಲಿ ಸರಿಯಾಗಿ ಬರೆಯದ ಕಾರಣ ಆಕೆ ಖಿನ್ನತೆಗೆ ಒಳಗಾಗಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನಿನ್ನೆಯಷ್ಟೇ ಕೀರ್ತಿ ತಂದೆ ಬಂದಿದ್ದು ಆಕೆಯೊಂದಿಗೆ ವಿದ್ಯಾಭ್ಯಾಸದ ಕುರಿತು ಚರ್ಚಿಸಿದ್ದರು ಅಲ್ಲದೆ ಆಕೆಯ ಮದುವೆ ಬಗ್ಗೆ ಸಹ ಮಾತನಾಡಿದ್ದರು ಎಂದು ಹೇಳಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಕುರಿತು ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು ತನಿಖೆ ಪ್ರಗತಿಯಲ್ಲಿದೆ.