ಉಪ್ಪುಂದ : ಗ್ರಾಮಸ್ಥರರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಸಮರ್ಪಕತೆ ವಿರುದ್ಧ ಬೃಹತ್ ಪ್ರತಿಭಟನೆ

0
171

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

Uppunda 04

ಬೈಂದೂರು ಮೇ.16 : ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿಗೆ ಸಂಬಂಧಿಸಿದ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

Uppunda 05 Uppunda 06jpg

ಮಾಜಿ ಜಿ.ಪಂ. ಸದಸ್ಯ ಮದನಕುಮಾರ ಮಾತನಾಡಿ, ಹೆದ್ದಾರಿ ಪ್ರಾಧಿಕಾರ ಶಿರೂರು ಹಾಗೂ ಬೈಂದೂರಿನಲ್ಲಿ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಂಡ ಹಾಗೆ ಅತಿ ಹೆಚ್ಚು ಜನಸಾಂದ್ರತೆ ಹೊಂದಿರುವ ಉಪ್ಪುಂದದಲ್ಲಿಯೂ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಮುಂಬರುವ ದಿನದಲ್ಲಿ ಹೆದ್ದಾರಿ ಕಾಮಗಾರಿ ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Uppunda 0007 Uppunda 08

ಉಪ್ಪುಂದ ಗ್ರಾ.ಪಂ. ಅಧ್ಯಕ್ಷೆ ದುರ್ಗಮ್ಮ, ಜಿ.ಪಂ. ಸದಸ್ಯೆ ಗೌರಿ ದೇವಾಡಿಗ, ಐ. ನಾರಾಯಣ, ಯು. ಸಂದೇಶ ಭಟ್, ವಾಸು ಪೂಜಾರಿ, ರಾಮಚಂದ್ರ ಖಾರ್ವಿ, ನಾಗರಾಜ, ಮೋಹನ್‍ಚಂದ್ರ ಮತ್ತಿತರ ಗ್ರಾಮ ಪಂಚಾಯತ್ ಸದಸ್ಯರು, ಪ್ರವೀಣಚಂದ್ರ, ಉಪ್ಪುಂದ ಜೇಸಿ ಅಧ್ಯಕ್ಷ ಮಂಜುನಾಥ ದೇವಾಡಿಗ, ಕಾರ್ಯದರ್ಶಿ ಗುರುರಾಜ ಶೆಟ್ಟಿ, ಸ್ಥಾಪಕಾಧ್ಯಕ್ಷ ದಿವಾಕರ ಶೆಟ್ಟಿ, ನರಸಿಂಹ ಹಳಗೇರಿ, ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್‍ಕುಮಾರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ವಿಶೇಷ ತಹಶೀಲ್ದಾರ ಕಿರಣ ಜಿ. ಗೋರಯ್ಯ ಮೂಲಕ ಮನವಿ ಸಲ್ಲಿಸಲಾಯಿತು.

Uppunda 09 Uppunda 10

 ಚಿತ್ರ  : ಎಚ್.ಸುಶಾಂತ್ ಬೈಂದೂರು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia