ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ನವೀಕೃತ ಕಟ್ಟಡ ಉದ್ಘಾಟನೆ : ಸರ್ವಧರ್ಮ ಸೌಹಾರ್ದ ಕೂಟ

0
125

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಬೆರೆಯುವ ಮೂಲಕ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಎಲ್ಲರೂ ಶ್ರಮಿಸಬೇಕು. ದೇಶದಲ್ಲಿ ಶಾಂತಿ ನೆಲೆಸಲು ಎಲ್ಲಾ ಧರ್ಮದವರು ಒಂದಾಗಿ ಸಹಬಾಳ್ವೆಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಬೇಕು. ಎಲ್ಲಾ ಧರ್ಮವನ್ನು ಸಮಾನತೆಯಿಂದ ನೋಡಬೇಕು. ಧರ್ಮಗಳ ಮುಖಾಂತರ ಸಮಾಜಕ್ಕೆ ಒಳಿತಾಗುವ ವ್ಯವಸ್ಥೆ ರೂಪುಗೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು.

gangollli may 17 copy

ಅವರು ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ನವೀಕೃತ ಕಟ್ಟಡದ ಆಶೀರ್ವಚನ ಮತ್ತು ಉದ್ಘಾಟನೆಯ ಪೂರ್ವಭಾವಿಯಾಗಿ ಚರ್ಚ್ ವಠಾರದಲ್ಲಿ ಮಂಗಳವಾರ ಜರಗಿದ ಸರ್ವಧರ್ಮ ಸೌಹಾರ್ದ ಕೂಟದಲ್ಲಿ ಅತಿಥಿಯಾಗಿ ಮಾತನಾಡಿದರು.

ಗಂಗೊಳ್ಳಿಯ ಕೊಸೆಸಾಂವ್ ಅಮ್ಮನವರ ದೇವಾಲಯ ಧರ್ಮದ ಸಾಮರಸ್ಯವನ್ನು ಬಿಂಬಿಸುತ್ತಿದ್ದು ಎಲ್ಲಾ ವರ್ಗದ ಜನರ ಸಹಾಯ ಸಹಕಾರ ಈ ನೂತನ ದೇವಾಲಯ ನಿರ್ಮಾಣದಲ್ಲಿ ದೊರೆತಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲಿ ಈ ದೇವಾಲಯ ಸರ್ವಧರ್ಮದ ಸೌಹಾರ್ದತೆಯ ಸಂಕೇತವಾಗಿ ಅಭಿವೃದ್ಧಿ ಹೊಂದುವಂತಾಗಲಿ ಎಂದರು.

gangolli may 17 (2) - Copy copy

ಗಂಗೊಳ್ಳಿಯ ಪುರೋಹಿತರಾದ ವೇದಮೂರ್ತಿ ಜಿ.ವೇದವ್ಯಾಸ ಕೃಷ್ಣಾನಂದ ಆಚಾರ್ಯ, ಮಸ್ಲಿಂ ಧರ್ಮಗುರು ಮೌಲಾನಾ ಅಬ್ದುಲ್ ಸಲಾಮ್ ಮದನಿ, ಉಡುಪಿ ಧರ್ಮಪ್ರಾಂತ್ಯದ ಅಂತರ್ ಧರ್ಮೀಯರ ಒಕ್ಕೂಟದ ನಿರ್ದೇಶಕ ರೆ.ಫಾ. ಲೂವಿಸ್ ಡೇಸಾ, ಶ್ರೀ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಶಾಖಾ ಪ್ರಬಂಧಕ ಜಿ.ಕೆ.ಶೀನಾ, ಗಂಗೊಳ್ಳಿ ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಮನ್ಸೂರ್ ನಾಕುದಾ ಶುಭ ಹಾರೈಸಿದರು.

ಇದೇ ಸಂದರ್ಭ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ್ಯಾಂಕ್ ಪಡೆದ ರಾಧಿಕಾ ಪೈ ಗಂಗೊಳ್ಳಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ ಸುನೀಲ್ ವೇಗಸ್ ಮತ್ತು ಪುರುಷೋತ್ತಮ ಅವರನ್ನು ಗೌರವಿಸಲಾಯಿತು.

ಕುಂದಾಪುರ ವಲಯ ಪ್ರಧಾನ ಧರ್ಮಗುರು ರೆ.ಫಾ. ಅನಿಲ್ ಡಿಸೋಜಾ, ಚರ್ಚಿನ ಧರ್ಮಗುರು ರೆ.ಫಾ. ಆಲ್ಬರ್ಟ್ ಕ್ರಾಸ್ತಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಕ್ರಾಸ್ತಾ, ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ಟೋಲಿನೊ ಉಪಸ್ಥಿತರಿದ್ದರು.

ಓವಿನ್ ರೆಬೆಲ್ಲೊ ಮತ್ತು ಲವಿಟಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಪ್ರೀತಿ ಫೆರ್ನಾಂಡಿಸ್ ವಂದಿಸಿದರು.

ವರದಿ : ಬಿ ನರಸಿಂಹ ನಾಯಕ್ ಉಪ್ಪುಂದ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia