ಮರವಂತೆ ವರಾಹ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಮೂರನೇ ವರ್ಷದ ವರ್ಧಂತ್ಯುತ್ಸವ …

0
137

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

18447423_1920352808199035_9202358845646940446_n copy

ಮರವಂತೆ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ  ಬುಧವಾರ ನಡೆದ ಬ್ರಹ್ಮಕಲಶೋತ್ಸವದ ವರ್ಧಂತ್ಯುತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು.

ಮರವಂತೆ ಮೇ.17 : ಮರವಂತೆ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೂರನೆಯ ವರ್ಧಂತ್ಯುತ್ಸವವು ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಸಾನ್ನಿಧ್ಯ ವಹಿಸಿ, ಆಶೀರ್ವಚನಗೈದ ಉಡುಪಿ ಕಾಣಿಯೂರು ರಾಮತೀರ್ಥ ಮಠಾಧೀಶ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಧರ್ಮಾಚರಣೆಗಳು ಮನುಷ್ಯರ ಸಾತ್ವಿಕ ಮತ್ತು ಮಾನವೀಯ ಮನಸ್ಥಿತಿಗೆ ಕಾರಣವಾಗುತ್ತದೆ. ದೇವಸ್ಥಾನಕ್ಕೆ ತೆರಳಿ ಪ್ರಾರ್ಥಿಸಿದರೆ ಶಾಂತಿ, ನೆಮ್ಮದಿ ಪ್ರಾಪ್ತವಾಗುತ್ತದೆ ಎಂದರು. ಮರವಂತೆಯ ಈ ದೇವಸ್ಥಾನದಲ್ಲಿ ವರಾಹ, ವಿಷ್ಣು, ನರಸಿಂಹ ದೇವರನ್ನು ಆರಾಧಿಸಲಾಗುತ್ತದೆ. ಎಲ್ಲರೂ ತಿಳಿದಂತೆ ನರಸಿಂಹ ಉಗ್ರ ಸ್ವರೂಪಿ ಅಲ್ಲ. ಶ್ರದ್ಧಾಂತ:ಕರಣದಿಂದ ಪ್ರಾರ್ಥಿಸಿದೆ ಒಲಿಯುತ್ತಾನೆ ಎನ್ನುವುದಕ್ಕೆ ಪ್ರಹ್ಲಾದ ಚರಿತ್ರೆ ನಿದರ್ಶನ ಎಂದು ಹೇಳಿದರು.

Maravanthe M 17-1 copy

ಮರವಂತೆ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ  ಬುಧವಾರ ನಡೆದ ಬ್ರಹ್ಮಕಲಶೋತ್ಸವದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮರವಂತೆ ರಾಜಶೇಖರ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ ಶೆಟ್ಟಿ, ಸದಸ್ಯರಾದ ಜಯಂತಿ ವಿಜಯಕೃಷ್ಣ, ಅಂಬಿಕಾ ರಾಜು ದೇವಾಡಿಗ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ತಾಲ್ಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ಸಾಮಾಜಿಕ ಮುಖಂಡ ಎಂ. ವಿನಾಯಕ ರಾವ್, ಉದ್ಯಮಿಗಳಾದ ಸುರೇಶ ಡಿ. ಪಡುಕೋಣೆ, ರಾಮ ಪೂಜಾರಿ ಮುಲ್ಲಿಮನೆ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ. ಎಂ. ಸೋಮಶೇಖರ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಬಿ. ವೆಂಕಟರಮಣ ಖಾರ್ವಿ, ಮರವಂತೆ-ಬಡಾಕೆರೆ ದೇವಾಡಿಗರ ಸಂಘದ ಅಧ್ಯಕ್ಷ ತಿಮ್ಮ ದೇವಾಡಿಗ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನರಸಿಂಹ ಪೂಜಾರಿ ಹೊಸಮನೆ, ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಮಾಜಿ ಅಧ್ಯಕ್ಷ ಸುಧಾಕರ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು.

Maravanthe M 17-2 copy

ಮರವಂತೆ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ  ಬುಧವಾರ ನಡೆದ ಬ್ರಹ್ಮಕಲಶೋತ್ಸವದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ‘ವರಾಹಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ರಾಜ್ಯ ರಸ್ಥೆ ಸಾರಿಗೆ ಸಂಸ್ಥೆಯ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಅವರಿಗೆ ಸಮಿತಿಯ ವತಿಯಿಂದ ‘ವರಾಹಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮಾಜಿ ಸದಸ್ಯ ಡಾ. ಎಂ. ರತ್ನಾಕರ ಹೆಬ್ಬಾರ್ ಸನ್ಮಾನಪತ್ರ ವಾಚಿಸಿದರು.

ದೇವಸ್ಥಾನದ ಆಡಳಿತಾಧಿಕಾರಿ ಸಂಜೀವ ನಾಯ್ಕ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಕೆ. ರಾಮಚಂದ್ರ ಹೆಬ್ಬಾರ್ ವಂದಿಸಿದರು. ಸತ್ಯನಾ ಕೊಡೇರಿ ಮತ್ತು ರಾಜೇಶ ನಿರೂಪಿಸಿದರು. ವರ್ಧಂತ್ಯುತ್ಸವದ ಅಂಗವಾಗಿ ಕಲಾಭಿವೃದ್ಧಿ ಹವನ, ಶತಕಲಶಾಭಿಷೇಕ, ವಿಷ್ಣುಸಹಸ್ರನಾಮ ಹವನ, ಅನ್ನಸಂತರ್ಪಣೆ ನಡೆದುವು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia