ಪಾರ್ವತಮ್ಮ ಆರೋಗ್ಯ ಸ್ಥಿತಿ ಗಂಭೀರ; ಸುಳ್ಳು ಸುದ್ದಿ ಹಬ್ಬಿಸಬೇಡಿ

0
143

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

28-1432786135-parvathamma-rajkumar-honoured-with-doctrate-from-bangalore-universityಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ,ದಿ. ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಡಾ.ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು, ವೈದ್ಯರ ತಂಡ ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಊಹಾಪೋಹಕ್ಕೆ ತೆರೆ ಎಳೆದು ಸ್ಪಷ್ಟನೆ ನೀಡಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದ್ದು, ಮುಂದಿನ 48ಗಂಟೆಗಳ ಕಾಲ ನಿಗಾವಹಿಸಲಾಗುತ್ತದೆ. ಬಳಿಕ ಚಿಕಿತ್ಸೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆದರೆ ಪಾರ್ವತಮ್ಮನವರ ಅನಾರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂಬ ಮಾಹಿತಿ ಬಂದಿದೆ. ಹಾಗಾಗಿ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಪುತ್ರ, ನಟ ಶಿವರಾಜ್ ಕುಮಾರ್ ತಿಳಿಸಿದರು.

ಅವರು ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಂತ ನಮಗೂ ಭಯ ಇದೆ. ಆದರೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಯಾರು ಆತಂಕ, ಗಾಬರಿಪಡಬೇಕಾದ ಅಗತ್ಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ರಾಘವೇಂದ್ರ ರಾಜ್ ಕುಮಾರ್ ಹೇಳಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia