ಉಪ್ಪುಂದ: ಚತುಷ್ಪಥ ಹೆದ್ದಾರಿ ಕಾಮಗಾರಿ ಸಮಸ್ಯೆಗಳಿಗೆ ಸ್ಪಂದಿಸಲು ಶಿಲ್ಪಾನಾಗ್ ಸೂಚನೆ

0
605

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 uppunda 1

ಚತುಷ್ಪಥ ಹೆದ್ದಾರಿ ಕಾಮಗಾರಿ ಯದಲ್ಲಿ ಸ್ಥಳೀಯ ಜನರಿಗಾಗುವ ತೊಂದರೆಗಳಿಗೆ ಸಕಾ ರಾತ್ಮಕವಾಗಿ ಸ್ಪಂದಿಸಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸಿದರು.  

ಉಪ್ಪುಂದ (ಬೈಂದೂರು) :  ಚತುಷ್ಪಥ ಹೆದ್ದಾರಿ ಕಾಮಗಾರಿ ಯದಲ್ಲಿ ಸ್ಥಳೀಯ ಜನರಿಗಾಗುವ ತೊಂದರೆಗಳಿಗೆ ಸಕಾ ರಾತ್ಮಕವಾಗಿ ಸ್ಪಂದಿಸಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರಿಗೆ ಸೂಚಿಸಿದರು.  ಉಪ್ಪುಂದದ ಸಾರ್ವಜನಿಕರು ಹೋರಾಟಕ್ಕೆ ಅಣಿಯಾಗುತ್ತಿರುವ  ಕಾರಣ ಶುಕ್ರವಾರ ಅಹವಾಲು ಆಲಿಸಿ, ಈ ಸೂಚನೆ ನೀಡಿದರು.

ಗುತ್ತಿಗೆದಾರರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ದೂರಿದರು.  ಗ್ರಾಮ ಪಂಚಾಯಿತಿ ಸದಸ್ಯ ಯು. ಸಂದೇಶ ಭಟ್ ಚರಂಡಿ, ಸರ್ವೀಸ್ ರಸ್ತೆ ಅಗತ್ಯ ಎಂದು ಒತ್ತಾಯಿಸಿದರು. ಶಿಲ್ಪಾ ಕೆಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಮೂಲಕ ಪರಿಹರಿಸುವ ಭರವಸೆಯಿತ್ತರು.  ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರಮೀಳಾ ದೇವಾಡಿಗ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದುರ್ಗಮ್ಮ, ಸದಸ್ಯರು, ವಿಶೇಷ ತಹಶೀಲ್ದಾರ್ ಕಿರಣ್ ಗೌರಯ್ಯ ಇದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)