ಮದುವೆಯ ಹೆಸರಲ್ಲಿ ನಿರಂತರ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

0
839

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಕಾಮುಕನಿಗೆ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲೆ ನಾಗಗೊಂಡನಹಳ್ಳಿ ನಿವಾಸಿ ರಾಮ ಶಿಕ್ಷೆಗೆ ಒಳಗಾದವ. ಮಂಗಳೂರಿನ ನೀರುಮಾರ್ಗದ ಸರಿಪಲ್ಲ ಬಳಿ 2017ರಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ರಾಮ, ಕೊಪ್ಪಳ ಜಿಲ್ಲೆಯಿಂದ ಪೋಷಕರೊಂದಿಗೆ ಕೆಲಸಕ್ಕೆ ಬಂದಿದ್ದ ಯುವತಿ ಮೇಲೆ 2018 ರ ಜನವರಿ 11 ರಂದು ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಿರಂತರ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾನೆ.

ಯುವತಿ 6 ತಿಂಗಳ ಗರ್ಭಿಣಿಯಾದ ಬಳಿಕ ಪೋಷಕರಿಗೆ ವಿಷಯ ಗೊತ್ತಾಗಿ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಪಟ್ಟಿ ಸಲ್ಲಿಸಿದ್ದಾರೆ. ಯುವತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಡಿಎನ್‌ಎ ಪರೀಕ್ಷೆ ಆಧರಿಸಿ ಮಗುವಿನ ತಂದೆ ರಾಮ ಎನ್ನುವುದು ದೃಢಪಟ್ಟಿದೆ.

ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 7 ವರ್ಷ ಕಠಿಣ ಸಜೆ 25 ಸಾವಿರ ರೂ. ದಂಡ, ನಂಬಿಸಿ ದ್ರೋಹವೆಸಗಿದ್ದಕ್ಕೆ 1 ವರ್ಷ ಸಜೆ ಹಾಗೂ 10 ಸಾವಿರ ರೂಪಾಯಿ ದಂಡ, ಕೊಲೆ ಬೆದರಿಕೆ ಹಾಕಿದ್ದಕ್ಕೆ 1 ವರ್ಷ ಸಜೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)